ಆಸ್ಪತ್ರೆಗೆ ಸಚಿವ ಯು.ಟಿ. ಖಾದರ್ ದಿಢೀರ್ ಭೇಟಿ: ಗರ್ಭಿಣಿ ಮಹಿಳೆ ನೆಲದ ಮೇಲೆ ಕುಳಿತಿದ್ದನ್ನು ಕಂಡು ವೈದ್ಯರ ವಿರುದ್ಧ ಆಕ್ರೋಶ!
ಬೆಂಗಳೂರು: ನೂತನ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಸ್ಪತ್ರೆಯ ಅವ್ಯವಸ್ಥೆ ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿತನ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಲ್ಲಿದ್ದ ವೈದ್ಯರು ಹಾಗೂ ಆಡಳಿತ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಯು.ಟಿ. ಖಾದರ್ ಅವರು ಆಸ್ಪತ್ರೆಯ ಲೇಬರ್ ವಾರ್ಡ್ (ಹೆರಿಗೆ ವಿಭಾಗ) ಬಳಿ ಪರಿಶೀಲನೆ ನಡೆಸುತ್ತಿದ್ದಾಗ, ಗರ್ಭಿಣಿ ಮಹಿಳೆಯೊಬ್ಬರು ಆಸನಗಳಿಲ್ಲದೆ ನೆಲದ ಮೇಲೆಯೇ ಕುಳಿತಿರುವುದು ಅವರ ಗಮನಕ್ಕೆ ಬಂದಿದೆ. ಇದನ್ನು ಕಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಚಿವರು, “ಒಬ್ಬ ಗರ್ಭಿಣಿ ಮಹಿಳೆ ಬಂದು ಇಲ್ಲಿ ನೆಲದ ಮೇಲೆ ಕುಳಿತುಕೊಳ್ಳಬೇಕಾ? ನಿಮ್ಮಲ್ಲಿ ಕನಿಷ್ಠ ಸೌಜನ್ಯ ಹಾಗೂ ವ್ಯವಸ್ಥೆ ಇಲ್ಲವೇ?” ಎಂದು ವೈದ್ಯರನ್ನು ನೇರವಾಗಿ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.
ಆಸ್ಪತ್ರೆಯ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿದ ಅವರು, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿವೆಯೇ ಮತ್ತು ಔಷಧಿಗಳ ಲಭ್ಯತೆ ಇದೆಯೇ ಎಂಬುದನ್ನು ಖುದ್ದಾಗಿ ಪರಿಶೀಲಿಸಿದರು. ಬಡ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಮತ್ತು ಆಸ್ಪತ್ರೆಯ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಕಡಕ್ ಸೂಚನೆ ನೀಡಿದರು.
ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಮತ್ತು ಗರ್ಭಿಣಿಯರಿಗೆ ಆಸ್ಪತ್ರೆಗಳಲ್ಲಿ ಸೂಕ್ತ ಆಸನ ಹಾಗೂ ಚಿಕಿತ್ಸೆಯ ವ್ಯವಸ್ಥೆ ಕಲ್ಪಿಸುವುದರಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























