ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: 3 ಹಸುಗಳನ್ನು ಮಾಲಿಕರಿಗೆ ನೀಡಿದ ಸಚಿವ ಜಮೀರ್ ಅಹ್ಮದ್

ಬೆಂಗಳೂರು: ವಿನಾಯಕ ನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆಗೆ ಹಿನ್ನೆಲೆ ಹಸುವಿನ ಮಾಲಿಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹ್ಮದ್ ಮೂರು ಲಕ್ಷ ವೆಚ್ಚದಲ್ಲಿ ಮೂರು ಹಸುಗಳನ್ನು ಖರೀದಿಸಿ ನೀಡಿದ್ದಾರೆ.
ಕೊಟ್ಟ ಮಾತಿನಂತೆಯೇ ಸಚಿವ ಜಮೀರ್ ಹಸುಗಳ ಮಾಲಿಕರಿಗೆ ಮೂರು ಹಸುಗಳನ್ನು ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ಕ್ಷಮೆ ಕೋರುವುದಾಗಿ ತಿಳಿಸಿದರಲ್ಲದೇ, ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ, ನಾವು ಶಾಸಕರ ಜೊತೆಗಿದ್ದೇವೆ ಎಂದು ಹೇಳಿದರು.
ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಮತ್ತಿತರರು ಇದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: