ಲೋಕ ಅಖಾಡದಲ್ಲಿ ಸಚಿವರ ಮಕ್ಕಳ ಸ್ಪರ್ಧೆ: ಯಾರು ಗೆದ್ರು..? ಯಾರು ಸೋತ್ರು..? - Mahanayaka

ಲೋಕ ಅಖಾಡದಲ್ಲಿ ಸಚಿವರ ಮಕ್ಕಳ ಸ್ಪರ್ಧೆ: ಯಾರು ಗೆದ್ರು..? ಯಾರು ಸೋತ್ರು..?

04/06/2024

2024ರ ಲೋಕಸಭೆ ಚುನಾವಣೆ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಸಚಿವರ ಮಕ್ಕಳೂ ಕೂಡ ಸ್ಪರ್ಧಿಸಿದ್ದು, ಅವರ ರಾಜಕೀಯ ಭವಿಷ್ಯ ಬಹಿರಂಗಗೊಂಡಿದೆ. ಯಾರು ಗೆದ್ರು..? ಯಾರು ಸೋತ್ರು..? ಇಲ್ಲಿದೆ ನೋಡಿ ಮಾಹಿತಿ.


Provided by

ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ,​ ಯುವ ಮುಖ ಸಂಯಕ್ತಾ ಪಾಟೀಲ್​ ರನ್ನು ಅಖಾಡಕ್ಕಿಳಿಸಿತ್ತು. ಆದರೆ ಸಂಯುಕ್ತ ಪಾಟೀಲ್​ ರಿಗೆ ಸೋಲಾಗಿದೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಯವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಕಣದಲ್ಲಿದ್ದರು. ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು, ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಣದಲ್ಲಿದ್ದರು. ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆಲುವಿನ ವಿಶ್ವಾಸ ಹೊಂದಿತ್ತು. ಆದರೆ ಅನುಭವಿ ರಾಜಕಾರಣಿ ಜಗದೀಶ್​ ಶೆಟ್ಟರ್​ ರ ವಿರುದ್ಧ ಸೋಲು ಕಂಡಿದ್ದಾರೆ.

ಬೀದರ್​ ಲೋಕಸಭಾ ಕ್ಷೇತ್ರದಲ್ಲಿ 1991ರಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೆ ಬಿಜೆಪಿ ಇಲ್ಲಿ ಹಿಡಿತ ಸಾಧಿಸಿಕೊಂಡು ಬಂದಿದೆ. ಹೀಗಾಗಿ ಈ ಬಾರಿ ಸಚಿವ ಈಶ್ವರ್ ಖಂಡ್ರೆ ಯವರ ಪುತ್ರ ಸಾಗರ್ ಖಂಡ್ರೆ ಮೂಲಕ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲ್ಲುವ ಕನಸು ಕಂಡಿತ್ತು. ಈ ಕನಸು ನನಸಾಗಿದ್ದು, ಸಾಗರ ಖಂಡ್ರೆ ವಿಜಯಶಾಲಿಯಾಗಿದ್ದಾರೆ.

2023 ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತಗಳಿಂದ ಸೋತಿದ್ದ ಸಚಿವ ರಾಮಲಿಂಗಾ ರೆಡ್ಡಿಯವರ ಪುತ್ರಿ ಸೌಮ್ಯಾ ರೆಡ್ಡಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಆದರೆ ಸೌಮ್ಯಾ ರೆಡ್ಡಿ ಸೋಲುಂಡಿದ್ದಾರೆ.

 

 

ಇತ್ತೀಚಿನ ಸುದ್ದಿ