ಎಸ್ ಸಿ, ಎಸ್ ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ: ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಎಸ್ ಸಿ, ಎಸ್ ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದು, ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರವಾಗಿ ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ ಎಂದು ತಿಳಿಸಿದರು.
ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ಬದ್ಧವಾಗಿದೆ. ಸಮಸ್ಯೆಗಳನ್ನ ಬಗೆಹರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ. ಜನಪರವಾಗಿರುವ ಆಡಳಿತವನ್ನ ನಮ್ಮ ಸರ್ಕಾರ ಮಾಡ್ತಿದೆ ಎಂದು ಅವರು ತಿಳಿಸಿದರು.
ಯುವಕ ಯುವತಿಯರಿಗೆ ಸುಮಾರು 10 ಲಕ್ಷ ಉದ್ಯೋಗಕ್ಕೆ ಪ್ಲಾನ್ ಮಾಡಿದ್ದೇವೆ. ಹತ್ತು ಹಲವಾರು ಯೋಜನೆಗಳನ್ನ ರೂಪಿಸಿದ್ದೇವೆ. ಕಾರವಾರದಲ್ಲಿ 280 ಕೋಟಿಯ ಬಂದರು ನಿರ್ಮಾಣ, ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಇಂಡಸ್ಟ್ರಿಯಲೈಜೇಶನ್ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ದಾವಣಗೆರೆ, ಶಿವಮೊಗ್ಗ, ರಾಯಚೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೊಳ್ಳಲಿದೆ. 3 ಸಾವಿರ ಕೋಟಿಯ ರೋಡ್ ಡೆವಲಪ್ಮೆಂಟ್ ನಡೆದಿದೆ. ಕರ್ನಾಟಕ ರಾಜ್ಯಕ್ಕೆ ಹೆಚ್ಚು ಎಫ್ ಡಿಎ ಬಂದಿದೆ. ಇನೋವೇಶನ್ ನಲ್ಲಿ ನಾವೂ ನಂಬರ್ 1೧ ಅಂತಾ ನೀತಿ ಆಯೋಗ ಘೋಷಿಸಿದೆ. ಏರ್ಪೋರ್ಟ್ ಟರ್ಮಿನಲ್ ಉದ್ಘಾಟನೆ ಮಾಡುತ್ತೇವೆ ಎಂದರು.
ನವೆಂಬರ್ 19ಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ. ಇದೇ ವೇಳೆ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಿದ್ದಾರೆ. ಹೀಗೆ ಸಮಗ್ರ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka