ಅನುಚಿತ ವರ್ತನೆ: ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಶಾಸಕ ಸ್ಥಾನಕ್ಕೆ ಕುತ್ತು!? - Mahanayaka

ಅನುಚಿತ ವರ್ತನೆ: ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಶಾಸಕ ಸ್ಥಾನಕ್ಕೆ ಕುತ್ತು!?

mangalore school issu
14/02/2024

ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿಯವರ ಶಾಸಕ ಸ್ಥಾನಕ್ಕೆ ಕುತ್ತು ಬರುತ್ತಾ..? ಹೀಗೊಂದು ಪ್ರಶ್ನೆ ಎದುರಾಗಿದೆ‌.


Provided by

ಹೌದು…!  ಮಂಗಳೂರು ನಗರದ ಖಾಸಗಿ ಶಾಲೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಮತ್ತು ಶಾಸಕ ಭರತ್ ಶೆಟ್ಟಿ ಅವರು ವಿಚಾರಣೆ ಮಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದರ ಬದಲು ಅನುಚಿತವಾಗಿ ವರ್ತಿಸಿದ್ದಾರೆ. ಶಾಸಕರಾಗಿ ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ಶಾಸಕ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ  ಹಾಗೂ ವಿಧಾನಸಭಾ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಎಂ.ಎಲ್ಸಿ ಐವನ್ ಡಿಸೋಜಾ ತಿಳಿಸಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯಲ್ಲಿ ಶಿಕ್ಷಕಿಯಿಂದ ಏನಾದರೂ ತಪ್ಪಾಗಿದ್ದರೆ ಆ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮಕ್ಕಾಗಿ ದೂರು ನೀಡಿ ಬಳಿಕ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಅವಕಾಶ ಇತ್ತು. ಆದರೆ ವಿದ್ಯಾರ್ಥಿಗಳನ್ನು ಸೇರಿಸಿ ಶಾಲೆಯ ಆವರಣದಲ್ಲಿ ಶಿಕ್ಷಕರನ್ನು ಅವಮಾನಗೊಳಿಸಿ ನಿಂದಿಸಿರುವುದು, ಕೋಮುದ್ವೇಷದ ಹೇಳಿಕೆ ನೀಡಿರುವುದು ಖಂಡನೀಯ. ಶಾಸಕರ ಈ ವರ್ತನೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ