ದುರ್ವರ್ತನೆ: ನೆಲದಲ್ಲಿ ರಾಷ್ಟ್ರಧ್ವಜವನ್ನು ಹಾಸಿ ಇಸ್ಪೀಟ್ ಆಟವಾಡಿದ ಶಿಕ್ಷಕ..!

ರಾಷ್ಟ್ರಧ್ವಜವನ್ನು ಅಗೌರವಿಸುವುದು ಶಿಕ್ಷಾರ್ಹ ಅಪರಾಧ. ಈ ವಿಚಾರ ಗೊತ್ತಿದ್ದು ಶಿಕ್ಷಕನೂ ಸೇರಿದಂತೆ ಈವರು ರಾಷ್ಟ್ರಧ್ವಜವನ್ನು ನೆಲದ ಮೇಲೆ ಹಾಸಿ ಇಸ್ಪೀಟ್ ಆಡಿದ್ದಾರೆ. ನಾಲ್ಕು ಜನ ಧ್ವಜವನ್ನು ನೆಲದ ಮೇಲೆ ಹಾಸಿ ಚಪ್ಪಲಿ, ಶೂ ಹಾಕಿಕೊಂಡೇ ಇಸ್ಪೀಟ್ ಆಡಿದ್ದಾರೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಲಕ್ಷ್ಮಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನಾ ನದಿಯ ಸಮೀಪದಲ್ಲಿ ಒಂದಷ್ಟು ಜನ ರಾಷ್ಟ್ರ ಧ್ವಜವನ್ನು ನೆಲಕ್ಕೆ ಹಾಸಿ ಅದರ ಮೇಲೆ ಇಸ್ಪೀಟ್ ಆಡುವ ಮೂಲಕ ಅವಮಾನ ಮಾಡಿದ್ದಾರೆ.
ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ವಿಡಿಯೋ ಆಧರಿಸಿ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಘಾತಕಾರಿ ವಿಷಯವೆಂದರೆ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದವರಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಸೇರಿದ್ದಾರೆ. ಮತ್ತೊಬ್ಬ ವ್ಯಕ್ತಿ ಅಲ್ಲಿನ ವಿದ್ಯುತ್ ಇಲಾಖೆಯ ಎಸ್ ಡಿಒ ಚಾಲಕ. ಉಳಿದ ಇಬ್ಬರು ಸ್ಥಳೀಯರು. ಈ ನಾಲ್ವರ ವಿರುದ್ಧ ಜಮುನಾಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth