ಡಾ.ಶಿವಕುಮಾರಸ್ವಾಮೀಜಿಯ ಪುತ್ಥಳಿ ವಿರೂಪಗೊಳಿಸಿದ್ದ ಕಿಡಿಗೇಡಿಯ ಬಂಧನ - Mahanayaka

ಡಾ.ಶಿವಕುಮಾರಸ್ವಾಮೀಜಿಯ ಪುತ್ಥಳಿ ವಿರೂಪಗೊಳಿಸಿದ್ದ ಕಿಡಿಗೇಡಿಯ ಬಂಧನ

raj shivu
05/12/2024

ಬೆಂಗಳೂರು: ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿಯ ಪುತ್ಥಳಿ ವಿರೂಪಗೊಳಿಸಿದ್ದ ಕಿಡಿಗೇಡಿಯನ್ನು ಗಿರಿನಗರ  ಪೊಲೀಸರು ಬಂಧಿಸಿದ್ದಾರೆ.

ರಾಜ್ ಶಿವು ಬಂಧಿತ ಆರೋಪಿಯಾಗಿದ್ದಾನೆ.  ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿಯಲ್ಲಿ  ಕಳೆದ ಶನಿವಾರ ರಾತ್ರಿ ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿಯ ಪುತ್ಥಳಿಯನ್ನು  ಈತ ವಿರೂಪಗೊಳಿಸಿದ್ದ ಎಂದು ಆರೋಪಿಸಲಾಗಿದೆ.


ADS

ಶನಿವಾರ ರಾತ್ರಿ ಸುತ್ತಿಗೆ ತೆಗೆದುಕೊಂಡು ಬಂದು ಯಾರೂ ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಆರೋಪಿ ಎಸ್ಕೇಪ್ ಆಗಿದ್ದ ಎನ್ನಲಾಗಿದೆ. ಸದ್ಯ ಗಿರಿನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ