ನಟ ಉಪೇಂದ್ರ ಹಾಗೂ ಕುಟುಂಬಸ್ಥರ ಮೊಬೈಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು - Mahanayaka
6:12 PM Wednesday 5 - November 2025

ನಟ ಉಪೇಂದ್ರ ಹಾಗೂ ಕುಟುಂಬಸ್ಥರ ಮೊಬೈಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು

upendra
15/09/2025

ಬೆಂಗಳೂರು: ನಟ ಉಪೇಂದ್ರ ಹಾಗೂ ಅವರ ಕುಟುಂಬಸ್ಥರ ಫೋನ್ ಹ್ಯಾಕ್ ಮಾಡಿರುವ ಬಗ್ಗೆ ಉಪೇಂದ್ರ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಘಟನೆ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಪ್ರಿಯಾಂಕಾಗೆ ಬೆಳಿಗ್ಗೆ ಒಂದು ಮೆಸೇಜ್ ಬಂತು. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧದ್ದೇ ಮೆಸೇಜ್ ಇದು ಎಂದು ಅವಳು ಭಾವಿಸಿದಳು. ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್​ ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ’ ಎಂದು ಉಪೇಂದ್ರ ಹೇಳಿದ್ದಾರೆ.

ನನ್ನ ಮೊಬೈಲ್ ​ನಿಂದ ಅಥವಾ ಪ್ರಿಯಾಂಕಾ ಮೊಬೈಲ್ ​ನಿಂದ ಹಣ ಕೊಡಿ ಎಂದು ಮೆಸೇಜ್ ಬಂದರೆ ಇಗ್ನೋರ್ ಮಾಡಿ ಎಂದು ಉಪೇಂದ್ರ ಮನವಿ ಮಾಡಿದ್ದಾರೆ.

ಈಗಾಗಲೇ ಪ್ರಿಯಾಂಕಾ ವಾಟ್ಸಾಪ್​ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್ ​ನಲ್ಲಿರೋ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ ಎಂದು ಅವರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ