ಇಸ್ರೋ ವಿಜ್ಞಾನಿಯ ಕಾರಿಗೆ ಕಲ್ಲೆಸೆದ ದುಷ್ಕರ್ಮಿಗಳು
29/08/2023
ಬೆಂಗಳೂರು: ಇಸ್ರೋ ವಿಜ್ಞಾನಿಯ ಕಾರನ್ನು ಹಿಂಬಾಲಿಸಿ ಕಲ್ಲೆಸೆದ ಘಟನೆ ವರದಿಯಾಗಿದ್ದು, ರತನಹಳ್ಳಿ ಮುಖ್ಯ ರಸ್ತೆಯಲ್ಲಿ ಆಗಸ್ಟ್ 24ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರನ್ನು ತಡೆದು ನಿಲ್ಲಿಸಿದ ದುಷ್ಕರ್ಮಿಗಳು ಕಾರಿನ ಹಿಂಭಾಗದ ಗಾಜನ್ನು ಒಡೆದು ಹಾಕಿದ್ದಾರೆ.
ಈ ಘಟನೆ ಬಗ್ಗೆ ದೂರು ನೀಡಲು ಮುಂದಾದಾಗ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆನ್ನಲಾಗಿದೆ. ಬಳಿಕ ಈ ಬಗ್ಗೆ ಟ್ವೀಟ್ ಮಾಡಿದ ಬಳಿಕ ಎಚ್ಚೆತ್ತುಕೊಂಡ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದು ಬಂದಿದೆ.




























