ಹೋಳಿ: ರಾಸಾಯನಿಕ ಲೇಪಿತ ಬಣ್ಣ ಎರಚಿದ ದುಷ್ಕರ್ಮಿಗಳು, 7 ವಿದ್ಯಾರ್ಥಿನಿಯರು ಅಸ್ವಸ್ಥ!

ಗದಗ: ಹೋಳಿ ಹಿನ್ನೆಲೆ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿದ್ದರಿಂದ 7 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿನಿಯರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ತೊಂದರೆ, ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಗೆ ಸ್ಥಳಾಂತರಿಸಲಾಗಿದೆ. ಉಳಿದ ವಿದ್ಯಾರ್ಥಿನಿಯರನ್ನು ಲಕ್ಷ್ಮೇಶ್ವರದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿನಿಯರು ಲಕ್ಷ್ಮೇಶ್ವರ ಪಟ್ಟಣದ ಸುವರ್ಣಗಿರಿ ತಾಂಡಾ ಬಳಿಯ ಬಸ್ ನಿಲ್ದಾಣದಲ್ಲಿ ಶಾಲೆಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ವೇಳೆ ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳ ಗುಂಪು ಬಸ್ ನಿಲ್ದಾಣದ ಬಳಿ ನಿಂತಿದ್ದ ವಿದ್ಯಾರ್ಥಿನಿಯರ ಮೇಲೆ ಬಣ್ಣ ಎರಚಲು ಪ್ರಾರಂಭಿಸಿದ್ದಾರೆ. ಅದೇ ವೇಳೆಗೆ ಶಾಲಾ ಬಸ್ ಬರುತ್ತಿದ್ದಂತೆ ಬಾಲಕಿಯರು ಬಸ್ ಹತ್ತಿದ್ದಾರೆ.
ಆದರೂ ಸುಮ್ಮನಾಗದೇ 7 ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ರಾಸಾಯನಿಕ ಲೇಪಿತ ಬಣ್ಣಗಳನ್ನು ಎರಚಿದ್ದು, ಇದರಿಂದ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7