11:55 AM Wednesday 10 - December 2025

ಶ್ರೀರಾಮನ ಕಟೌಟ್  ಹರಿದು ಹಾಕಿದ ಕಿಡಿಗೇಡಿಗಳು:  ಆರೋಪಿಗಳಿಗಾಗಿ ಪೊಲೀಸರಿಂದ ಶೋಧ

kolara
17/01/2024

ಕೋಲಾರ: ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಳವಡಿಸಲಾಗಿದ್ದ ಶ್ರೀರಾಮನ ಕಟೌಟ್ ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಗುಣಗಂಟೆಪಾಳ್ಯದಲ್ಲಿ ನಡೆದಿದೆ.

ಕಳೆದ ರಾತ್ರಿ 10:44ರ ಸುಮಾರಿಗೆ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.  ಕಟೌಟ್ ಹರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇನ್ನೂ ಘಟನೆಯಲ್ಲಿ ಕೋಮುದ್ವೇಷ ಹರಡುವ ಹುನ್ನಾರವಿದೆ ಎಂದು ಅನುಮಾನಿಸಲಾಗಿದೆ. ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಸಿಸಿ ಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version