ಹಿಂದೂಗಳ ಭಾವನೆಗೆ ಧಕ್ಕೆ ತರುವ ಅವಹೇಳನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಶಾಸಕ ಭರತ್ ಶೆಟ್ಟಿ ಮನವಿ

barath shety
01/07/2023

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕ ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಇಂದು ಮನವಿ ಮಾಡಿದ್ದಾರೆ.

ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಸದರಿ ಪೇಜ್ ಗಳ ಅಡ್ಮಿನ್ ಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಮಂಡಲ ಭಾಜಪಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version