ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯಗೆ ಶಾಸಕ ಹರೀಶ್ ಪೂಂಜ ಮನವಿ
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಮನವಿಯನ್ನು ಸಲ್ಲಿಸಿರುವ ಶಾಸಕರು, 2012 ಅಕ್ಟೋಬರ್ 9 ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಅದರ ವಿಚಾರವಾಗಿ ಅದಕ್ಕೆ ಸಂಬಂಧಿಸಿದಂತೆ ಹಲವಾರು ಇಲಾಖೆಗಳಿಂದ ತನಿಖೆ ನಡೆದು ನಂತರ ತಮ್ಮ ನೇತೃತ್ವದ ಸರ್ಕಾರ 2013 ರಲ್ಲಿ ಈ ಪ್ರಕರಣವನ್ನು ಸಿ.ಬಿ.ಐ. ಗೆ ಒಪ್ಪಿಸಿತ್ತು.
ಅಲ್ಲಿಂದ 2023 ರವರೆಗೂ ನಡೆದ ಸಿ.ಬಿ.ಐ, ತನಿಖೆಯಲ್ಲಿ ಶಂಕಿತ ಆರೋಪಿಯನ್ನು ದೋಷಮುಕ್ತಗೊಳಿಸಿ ನ್ಯಾಯಾಲಯವು ಆದೇಶ ನೀಡಿದೆ. ಮನವಿ ನೀಡುವ ಸಂದರ್ಭ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























