ನೂಕಾಟ ತಳ್ಳಾಟದ ವೇಳೆ ಬಿಪಿ ಹೆಚ್ಚಾಗಿ ಕುಸಿದು ಬಿದ್ದ ಶಾಸಕ ಯತ್ನಾಳ್: ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ವಿಧಾನ ಸಭೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸದಸ್ಯರು ಸ್ಪೀಕರ್ ಪೀಠದ ಮೇಲೆಯೇ ಪೇಪರ್ ಗಳನ್ನು ಎಸೆಯುವ ಮೂಲಕ ಅಗೌರವ ತೋರಿದ್ದು, ಈ ಹಿನ್ನೆಲೆಯಲ್ಲಿ 10 ಬಿಜೆಪಿ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸಸ್ಪೆಂಡ್ ಆದ ಶಾಸಕರ ಪೈಕಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೂಕಾಟ, ತಳ್ಳಾಟದ ನಡುವೆ ಬಿಪಿ ಹೆಚ್ಚಾಗಿ ಕುಸಿದು ಬಿದ್ದಿದ್ದಾರೆ.
ಸದ್ಯ ಶಾಸಕ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯತ್ನಾಳ್ ಅವರ ಪತ್ನಿ ಹಾಗೂ ಮಗ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇನ್ನೂ ಯತ್ನಾಳ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ನೂಕಾಟ ತಳ್ಳಾಟದಲ್ಲಿ ಬಿಪಿ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಅವರು ತಿಳಿಸಿದ್ದಾರೆ.
ಡೆಪ್ಯುಟಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಶೋಭೆ ತರಲ್ಲ: ಯು.ಟಿ.ಖಾದರ್
ಸಣ್ಣ ಘಟನೆ ದೊಡ್ಡದಾಗಿದೆ. ಪ್ರೋಟೋಕಾಲ್ ವಿಚಾರವಾಗಿ ನಾನು ಚರ್ಚೆಗೆ ಅವಕಾಶ ನೀಡಿದ್ದೆ. ಅದೇ ಕಾರಣ ಇಟ್ಟುಕೊಂಡು ಬಿಜೆಪಿ ಸದಸ್ಯರು ಧರಣಿ ಮಾಡಿದರು. ಧರಣಿ ಮಾಡುವ ಅವಕಾಶ ಎಲ್ಲರಿಗೂ ಇದೆ. ಆದರೆ, ಡೆಪ್ಯುಟಿ ಸ್ಪೀಕರ್ ಮುಂದೆ ನಡೆದುಕೊಂಡ ರೀತಿ ಶೋಭೆ ತರಲ್ಲ, ಬಿಜೆಪಿ ಸದಸ್ಯರು ಶಾಸನ ಸಭೆಗೆ ಅಗೌರವ ತೋರಿದ್ದಾರೆ ಎಂದು ಖಾದರ್ ಹೇಳಿದರು.
ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ:
ನಿನ್ನೆ ನಡೆದ ಪ್ರತಿಪಕ್ಷಗಳ ಸಭೆಯ ವೇಳೆ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಭೇಟಿ ನೀಡಿದ್ದನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿವೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಹೆಚ್.ಟಿ.ಕುಮಾರಸ್ವಾಮಿ, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನೋಟಿಎಸ್ ಗೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw