ಮಸೂದ್ ಕುಟುಂಬಕ್ಕೆ 5 ಲಕ್ಷ ಪರಿಹಾರದ ಚೆಕ್ ನೀಡಿದ ಕುಮಾರಸ್ವಾಮಿ
ಮಂಗಳೂರು: ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಕಳಂಜ ಗ್ರಾಮದ ಮಸೂದ್ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು.
ಮನೆಯಲ್ಲಿದ್ದ ಮಸೂದ್ ಅವರ ಸಹೋದರರು, ಚಿಕ್ಕಪ್ಪ ಸೇರಿ ಇಡೀ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಮುಖ್ಯಮಂತ್ರಿ, ಸಂತ್ರಸ್ತ ಕುಟುಂಬಕ್ಕೂ ಪರಿಹಾರವಾಗಿ 5 ಲಕ್ಷ ರೂ. ಚೆಕ್ ಅನ್ನು ಹಸ್ತಾಂತರ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು,, ಮಸೂದ್ ಅಮಾಯಕ. ಪೈಂಟರ್ ಆಗಿ ದುಡಿಯುತ್ತಿದ್ದ ಆತ ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಂಡಿರಲಿಲ್ಲ. ಈ ಬಗ್ಗೆ ನನಗೆ ಲಭಿಸಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ, ಪಕ್ಷದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ರಾಜ್ಯ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ, ಸುಳ್ಯ ಜೆಡಿಎಸ್ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ರಾಕೇಶ್ ಕುಂಟಿಕಾನ, ನಪಂ ಸದಸ್ಯ ಕೆ.ಎಸ್.ಉಮರ್, ರಮೀಝಾ ಬಾನು, ಹೈದರ್ ಪರ್ತಿಪ್ಪಾಡಿ, ಸುಶೀಲ್ ನೊರೋನ್ಹಾ, ಸೈಯದ್ ಮೀರಾ ಸಾಹೇಬ್ ಕಡಬ, ರತ್ನಾಕರ ಸುವರ್ಣ ಸುಮತಿ ಹೆಗ್ಡೆ, ಅಶ್ರಫ್ ಕಲ್ಲೇಗ ಮತ್ತಿತರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























