'ಮೋದಿ ಅದಾನಿ ಏಕ್ ಹೈ' ಜಾಕೆಟ್ ಧರಿಸಿ ವಿನೂತನ ರೀತಿಯಲ್ಲಿ ವಿಪಕ್ಷಗಳ ಪ್ರತಿಭಟನೆ - Mahanayaka
12:27 PM Wednesday 22 - October 2025

‘ಮೋದಿ ಅದಾನಿ ಏಕ್ ಹೈ’ ಜಾಕೆಟ್ ಧರಿಸಿ ವಿನೂತನ ರೀತಿಯಲ್ಲಿ ವಿಪಕ್ಷಗಳ ಪ್ರತಿಭಟನೆ

05/12/2024

‘ಮೋದಿ ಅದಾನಿ ಏಕ್ ಹೈ’, ‘ಅದಾನಿ ಸೇಫ್ ಹೈ’ ಎಂದು ಬರೆದಿರುವ ಜಾಕೆಟ್ ಧರಿಸಿ ವಿನೂತನ ರೀತಿಯಲ್ಲಿ ವಿಪಕ್ಷಗಳ ಸದಸ್ಯರು ಪ್ರತಿಭಟಿಸಿದ್ದಾರೆ. ಅದಾನಿ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ದೋಷಾರೋಪಣೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸಿದ್ದ ಪ್ರತಿಪಕ್ಷಗಳ ನಾಯಕರು ಗುರುವಾರ ಸಂಸತ್ತಿನಲ್ಲಿ ಟೀಶರ್ಟ್ ಧರಿಸಿ ‘ಮೋದಿ ಅದಾನಿ ಏಕ್ ಹೈ’ ಎಂದು ಪ್ರತಿಭಟನೆ ನಡೆಸಿದ್ದಾರೆ.

ಉದ್ಯಮಿ ಗೌತಮ್ ಅದಾನಿ ಮತ್ತು ಗೌತಮ್ ಅದಾನಿ ಸೋದರಳಿಯನ ವಿರುದ್ಧದ ಲಂಚ ಮತ್ತು ವಂಚನೆ ಆರೋಪದ ಬಗ್ಗೆ ಜಂಟಿ ಸಂಸದೀಯ ಸಮಿತಿ ಜೆಪಿಸಿ ಯಿಂದ ತನಿಖೆಗೆ ಪ್ರತಿಪಕ್ಷಗಳು ಆಗ್ರಹಿಸಿವೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಸಂಸದರು ಕಪ್ಪು ಬಣ್ಣದ ಜಾಕೆಟ್ ಧರಿಸಿದ್ದು, ಜಾಕೆಟ್ ನ ಹಿಂಬದಿಯಲ್ಲಿ’ಮೋದಿ-ಅದಾನಿ ಏಕ್ ಹೈ’ ಅದಾನಿ ಸೇಫ್ ಹೈ ಎಂದು ಬರೆಯಲಾಗಿತ್ತು.

ಅದಾನಿ ವಿರುದ್ಧ ಮೋದಿ ತನಿಖೆಗೆ ಆದೇಶಿಸಲು ಸಾಧ್ಯವಿಲ್ಲ. ಏಕೆಂದರೆ ಹಾಗೇ ಮಾಡಿದರೆ ಸ್ವತಃ ಅವರೇ ತನಿಖೆ ಎದುರಿಸಬೇಕಾಗುತ್ತದೆ ʼಮೋದಿ ಔರ್ ಅದಾನಿ ಏಕ್ ಹೈ. ದೋ ನಹೀ ಹೇ, ಏಕ್ ಹೈ,” ಎಂದು ರಾಹುಲ್ ಗಾಂಧಿ ಪ್ರತಿಭಟನೆ ವೇಳೆ ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ