ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ: ಕೂಲ್ ಆದ ಸಂಸದ ಪ್ರತಾಪ್ ಸಿಂಹ - Mahanayaka

ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ: ಕೂಲ್ ಆದ ಸಂಸದ ಪ್ರತಾಪ್ ಸಿಂಹ

prathapsimha
13/03/2024


Provided by

ಮೈಸೂರು: ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ. ನಾನು ಪಕ್ಷದ ಕಟ್ಟಾಳು. ಯಾರು ಏನೇ ಕೊಡ್ತೀನಿ ಅಂದರೂ ನಾನು ಎಲ್ಲೂ ಹೋಗಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಸಂಸದ ಪ್ರತಾಪ್ ಸಿಂಹಗೆ ಪತ್ರಕರ್ತರ ಭವನದಲ್ಲಿ ಅಭಿನಂದನಾ ಸಮಾರಂಭದ ಬಳಿಕ ಮಾತನಾಡಿದ ಅವರು, ಮೋದಿಗಿಂತ ದೊಡ್ಡದು ಯಾವುದೂ ಇಲ್ಲ. ಅವಕಾಶ ಮಾಡಿಕೊಟ್ಟರು ತೃಪ್ತಿ ಇದೆ. ಇಲ್ಲವಾರದರೂ ತೃಪ್ತಿ ಇದೆ. ಟಿಕೆಟ್ ವಿಚಾರದಲ್ಲಿ ಯಡಿಯೂರಪ್ಪ ಅವರನ್ನು ಎಳೆದು ತರಬೇಡಿ ಎಂದು ಇದೇ ವೇಳೆ ಮನವಿ ಮಾಡಿಕೊಂಡರು.

ಯಡಿಯೂರಪ್ಪ ಅವರು ಪಕ್ಷ ಕಟ್ಟದೆ ಇದ್ದರೆ ಕರ್ನಾಟಕದಲ್ಲಿ ಬಿಜೆಪಿ ಎಲ್ಲಿ ಇರುತ್ತಿತ್ತು?. ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿಯನ್ನು ಯಡಿಯೂರಪ್ಪ ಅವರು ಕಟ್ಟದೆ ಇದ್ದರೆ ನಮ್ಮಂಥವರು ಸಂಸದ ಆಗೋದಿಕ್ಕೆ ಆಗುತ್ತಿತ್ತಾ?. ಕರ್ನಾಟಕಕ್ಕೆ ಯಡಿಯೂರಪ್ಪ ಅವರು ಒಂಥರ ಮೋದಿ ಇದ್ದ ರೀತಿ ಎಂದರು.

ಟಿಕೆಟ್ ಕೊಟ್ಟರೆ ಸಂಸದನಾಗಿ ಕೆಲಸ ಮಾಡ್ತೀನಿ. ಮಹಾರಾಜರಿಗೆ ಕೊಟ್ಟರೆ ಕಾರ್ಯಕರ್ತನಾಗಿ ಕೆಲಸ ಮಾಡ್ತೀನಿ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಅವರನ್ನು ಗೆಲ್ಲಿಸಿಕೊಂಡು ಬರುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ