ಅಮೆರಿಕದಲ್ಲಿ ಮೋದಿ ಟ್ರಂಪ್ ಭೇಟಿ: ವ್ಯಾಪಾರ ಒಪ್ಪಂದಗಳ ಬಗ್ಗೆ ಮಾತುಕತೆ

14/02/2025

ಅಮೆರಿಕ ಅಧ್ಯಕ್ಷರಾಗಿ ಎರಡನೇ ಅವಧಿಗೆ ಅಧಿಕಾರ ಸ್ವೀಕರಿಸಿದ ನಂತರ ಡೊನಾಲ್ಡ್ ಟ್ರಂಪ್ ಅಗರನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನಕ್ಕೆ ಭೇಟಿ ನೀಡಿ ಮೊದಲ ಬಾರಿಗೆ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಶ್ವೇತಭವನದಲ್ಲಿ ಅಪ್ಪುಗೆ, ಪರಸ್ಪರ ಆತ್ಮೀಯವಾಗಿ ಶುಭಾಶಯ ಕೋರಿದರು ಮತ್ತು ಕೈಕುಲುಕಿದರು. ಇಬ್ಬರೂ ನಾಯಕರು ತಮ್ಮ ಬಲವಾದ ಬಂಧವನ್ನು ಶ್ಲಾಘಿಸಿದರು ಮತ್ತು ಬಲವಾದ ಸಂಬಂಧಗಳು ಮತ್ತು ವ್ಯಾಪಾರ ಒಪ್ಪಂದಗಳ ಭರವಸೆಯನ್ನು ವ್ಯಕ್ತಪಡಿಸಿದರು.

ಇಂಧನ, ತಂತ್ರಜ್ಞಾನ ಮತ್ತು ಸಂಪರ್ಕದಲ್ಲಿ ಸಹಕಾರವನ್ನು ಹೆಚ್ಚಿಸಲು ಒಪ್ಪಿಕೊಂಡ ಟ್ರಂಪ್ ಮತ್ತು ಮೋದಿ ವಿಶ್ವದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ಪ್ರಜಾಪ್ರಭುತ್ವಗಳ ನಡುವಿನ “ವಿಶೇಷ ಭೇಟಿಯ ಮಹತ್ವದ ಬಗ್ಗೆ ಒತ್ತಿ ಹೇಳಿದರು.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿಯವರನ್ನು “ಉತ್ತಮ ಸ್ನೇಹಿತ” ಎಂದು ಕರೆದರು. ಆದರೆ ಯುಎಸ್ ವ್ಯಾಪಾರ ಪಾಲುದಾರರ ಮೇಲೆ ವಿಧಿಸುತ್ತಿರುವ ಹೆಚ್ಚಿನ ಸುಂಕದಿಂದ ಭಾರತಕ್ಕೆ ವಿನಾಯಿತಿ ನೀಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version