ಮೇ 6ರಂದು ಬೆಂಗಳೂರಲ್ಲಿ ಮೋದಿ ರೋಡ್‌ ಶೋ - Mahanayaka

ಮೇ 6ರಂದು ಬೆಂಗಳೂರಲ್ಲಿ ಮೋದಿ ರೋಡ್‌ ಶೋ

pm narendra modi
04/05/2023

ಕರ್ನಾಟಕದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಆಡಳಿತಕ್ಕೆ ತರಬೇಕು ಎನ್ನುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೆಂಗಳೂರಲ್ಲಿ ರೋಡ್‌ ಶೋ ನಡೆಸಲಿದೆ.ಮೇ 6 ರಂದು ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ರಾಜಧಾನಿಯ 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ. ದೂರ ರೋಡ್‌ ಶೋ ನಡೆಸಲಿದ್ದಾರೆ.


Provided by

ಬೆಂಗಳೂರಿನ 23 ವಿಧಾನಸಭಾ ಕ್ಷೇತ್ರಗಳಲ್ಲಿ ಈ ರೋಡ್ ಶೋ ನಡೆಯಲಿದ್ದು, ಸುಮಾರು 38 ಕಿ.ಮೀ ರೋಡ್ ಶೋ ಸಾಗಲಿದ್ದು, ನಮೋ ಮೆಗಾ ರೋಡ್ ಶೋ ಮ್ಯಾಪ್‌ ಕೂಡ ಸಿದ್ಧವಾಗಿದೆ.

ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ 10.1 ಕಿ.ಮೀ. ಸಂಜೆ 4ರಿಂದ ರಾತ್ರಿ 10ರ ವರೆಗೆ 26.5 ಕಿ.ಮೀ. ದೂರ ರೋಡ್‌ ಶೋ ನಡೆಯಲಿದ್ದು, ಹತ್ತು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ‌.

ಸಂಚಾರ ದಟ್ಟಣೆ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರಿಗೆ ತೊಂದರೆಯಾಗದಂತೆ ಪೊಲೀಸ್‌ ಮತ್ತು ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.

ಮೇ.6ರಂದು ಕೋಣನಕುಂಟೆಯಿಂದ  ರೋಡ್ ಶೊ ಆರಂಭಗೊಂಡು, ಜಯನಗರ, ಗಾಂಧಿ ಬಜಾರ್, ಶಾಂತಿನಗರ, ಬಿನ್ನಿಮಿಲ್ ಮಾಗಡಿ ರಸ್ತೆ, ಟೋಲ್ ಗೇಟ್, ದಾಸರಹಳ್ಳಿ, ಹೌಸಿಂಗ್ ಬೋರ್ಡ್ ಬಸವೇಶ್ವರ ನಗರ, ನವರಂಗ್, ಮಲ್ಲೇಶ್ವರಂ,ಸಂಪಿಗೆ ರಸ್ತೆ ಸರ್ಕಲ್ ಮಾರಮ್ಮ, ದೇವಸ್ಥಾನದವರೆಗೆ ಸಾಗಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ