2:51 AM Thursday 20 - November 2025

ಪರುಶುರಾಮ್ ಕ್ಷೇತ್ರದ ಎನ್ನ ಮೋಕೆದ ತುಳುವಪ್ಪೆ ಜೋಕುಲೆಗ್ ಸೊಲ್ಮೆಲು: ತುಳುವಲ್ಲೇ ಭಾಷಣ ಆರಂಭಿಸಿದ ಮೋದಿ

manglore
03/05/2023

ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಳಿಯ ಮೈದಾನದಲ್ಲಿಂದು ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಇದೇ ವೇಳೆ ಮಾತನಾಡಿದ ಮೋದಿ, ”ಪರುಶುರಾಮ್ ಕ್ಷೇತ್ರದ ಎನ್ನ ಮೋಕೆದ ತುಳುವಪ್ಪೆ ಜೋಕುಲೆಗ್ ಸೊಲ್ಮೆಲು” ಎಂದು ತುಳುವಿನಲ್ಲೇ ಭಾಷಣ ಆರಂಭಿಸಿದರು. ‘

ಕರ್ನಾಟಕವನ್ನು ಔದ್ಯೋಗಿಕ ಕ್ಷೇತ್ರದಲ್ಲಿ ಸೂಪರ್ ಪವರ್,ಕೃಷಿ, ಮೀನುಗಾರಿಕೆ, ಶಿಕ್ಷಣ,ಆರೋಗ್ಯ,ಅಭಿವೃದ್ಧಿ ಕ್ಷೇತ್ರದಲ್ಲಿ ನಂಬರ್ ಒನ್ ಮಾಡುವುದು ಬಿಜೆಪಿ ಗುರಿಯಾಗಿದೆ. ಡಬಲ್ ಇಂಜಿನ್ ಸರಕಾರ ಮಹಿಳಾ ಸಶಕ್ತೀಕರಣ,ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ,ಬಡವರಿಗೆ ಮನೆ ನಿರ್ಮಾಣ ಯೋಜನೆ ಹಮ್ಮಿಕೊಂಡಿದೆ. ಕರಾವಳಿಯ ಮೀನುಗಾರರ ಯುವಕರ ಬದುಕಿನಲ್ಲಿ ಸಮಗ್ರ ಬದಲಾವಣೆ ಬಿಜೆಪಿಯ ಗುರಿಯಾಗಿದೆ” ಎಂದರು. ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ರಿವರ್ಸ್ ಗೇರ್ ನಲ್ಲಿ ಸಾಗುತ್ತದೆ. ಸುಸ್ಥಿರ ಸರಕಾರ ಅವರಿಂದ ಸಾಧ್ಯವಿಲ್ಲ.ಶಾಂತಿ,ಪ್ರಗತಿ ಅವರಿಗೆ ಬೇಕಾಗಿಲ್ಲ.

ದೇಶದ ಸೇನೆ , ಸೈನಿಕರನ್ನು ಅವಮಾನಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ.ರಾಷ್ಟ್ರ ವಿರೋಧಿ ಗಳಿಗೆ ಬೆಂಬಲ ನೀಡುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ. ದೇಶದ ಪ್ರಜಾಪ್ರಭುತ್ವ, ಅಭಿವೃದ್ಧಿ ವಿಶ್ವ ದ ಪ್ರಶಂಸೆಗೆ ಪಾತ್ರ ವಾಗಿದೆ ಈ ಬಾರಿ ಕರ್ನಾಟಕದಲ್ಲಿ ಬಹುಮತದ ಬಿಜೆಪಿ ಸರಕಾರ ರಚನೆಗೆ ನಿಮ್ಮ ಸಂಕಲ್ಪವಾಗಬೇಕು’ ಎಂದು ಮೋದಿ ಮನವಿ ಮಾಡಿದರು.

ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸರ್ಕಾರದ ಸಚಿವೆ ಸಂಸದೆ ಶೋಬಾ ಕರಂದ್ಲಾಜೆ, ಸಚಿವ ಸುನಿಲ್ ಕುಮಾರ್, ಶಾಸಕ ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್,ವೇದವ್ಯಾಸ ಕಾಮತ್,ಹರೀಶ್ ಪೂಂಜಾ,ಪ್ರತಾಪ್ ಸಿಂಹ ನಾಯಕ್ ,ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದ್ರೆ ಹಾಗೂ ಉಭಯ ಜಿಲ್ಲೆ ಗಳ 13 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗಳಾದ ಭಾಗೀರಥಿ ಸುಳ್ಯ, ಆಶಾ ತಿಮ್ಮಪ್ಪ ಪುತ್ತೂರು, ಸತೀಶ್ ಕುಂಪಲ ಮಂಗಳೂರು, ಯಶ್ಫಾಲ್ ಸುವರ್ಣ, ಉಪಸ್ಥಿತರಿದ್ದರು. ಸಮಾವೇಶದ ಬಳಿಕ ಪ್ರಧಾನಿ ಮೋದಿಯವರು ಅಂಕೋಲಕ್ಕೆ ತೆರಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version