3ನೇ ಬಾರಿಗೆ ಮೋದಿ ಪ್ರಧಾನಿ ಪಟ್ಟಕ್ಕೆ: ಆರಂಭದಲ್ಲೇ ಬಿಜೆಪಿಗೆ ಖಾತೆ ಹಂಚಿಕೆಗಳ ವಿವಾದದ ‘ಪೆಟ್ಟು’

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಭಾನುವಾರ(ಜೂ.9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂನ್ 8 ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ವರದಿಯಾಗಿತ್ತು. ಖಾತೆ ಹಂಚಿಕೆಗಳ ವಿವಾದ ಈ ಬದಲಾವಣೆಗೆ ಕಾರಣ ಎಂದು ಹೇಳಲಾಗಿದೆ.
ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಜೂನ್ 12 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೊದಲು ಜೂ.9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.
ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಜೂ.9 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿಂದ ನಾಯ್ಡು ಪ್ರಮಾಣ ವಚನ ದಿನಾಂಕವನ್ನು ಮುಂದೂಡಿದ್ದಾರೆ.
ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಪಕ್ಷ ಟಿಡಿಪಿ ಅಭೂತಪೂರ್ವ ಯಶಸ್ಸು ಗಳಿಸಿದ್ದು, ಲೋಕಸಭೆಯಲ್ಲೂ 16 ಸ್ಥಾನ ಗೆಲ್ಲುವುದರೊಂದಿಗೆ ಎನ್‌ಡಿಎ ಒಕ್ಕೂಟದಲ್ಲಿ ಕಿಂಗ್ ಮೇಕರ್‌ಗಳಲ್ಲಿ ಪ್ರಮುಖ ಪಕ್ಷವಾಗಿದೆ.
ಬಿಜೆಪಿ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗಳನ್ನು ಗಳಿಸುವಲ್ಲಿ ವಿಫಲವಾದ ಕಾರಣ ಟಿಡಿಪಿ ಹಾಗೂ ಜೆಡಿಯು ಕೇಂದ್ರದ ನೂತನ ಎನ್‌ಡಿಎ ಸರ್ಕಾರದಲ್ಲಿ ಪ್ರಮುಖ ಪಾತ್ರವಹಿಸಲಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth