ನನ್ನ ಅಸಮಾಧಾನ ‘ಮೋದಿಯ ನೀತಿ’ಗಳ ವಿರುದ್ಧ, ಬಿಜೆಪಿಯ ವಿರುದ್ಧವಲ್ಲ | ಮಂಗಳೂರಿನಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿಕೆ - Mahanayaka
9:29 AM Wednesday 15 - October 2025

ನನ್ನ ಅಸಮಾಧಾನ ‘ಮೋದಿಯ ನೀತಿ’ಗಳ ವಿರುದ್ಧ, ಬಿಜೆಪಿಯ ವಿರುದ್ಧವಲ್ಲ | ಮಂಗಳೂರಿನಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿಕೆ

subramanian swamy
08/12/2021

ಮಂಗಳೂರು:  ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸುತ್ತಿಲ್ಲ, ಆದರೆ, ಅವರು ಅನುಸರಿಸುತ್ತಿರುವ ನೀತಿಗಳನ್ನು ವಿರೋಧಿಸುತ್ತೇನೆ ಎಂಧು ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.


Provided by

ಮಂಗಳೂರಿಗೆ ಮಂಗಳವಾರ ಆಗಮಿಸಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಬಿ.ಎಂ.ಹೆಗ್ಡೆ ಅವರನ್ನು ಅಭಿನಂದಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹಿಂದುತ್ವ, ಆರ್ಥಿಕ ಹಾಗೂ ವಿದೇಶಾಂಗ ನೀತಿಗಳು ಸೇರಿದಂತೆ ಬಿಜೆಪಿ ತನ್ನ ಮೂಲ ಸಿದ್ಧಾಂತದಿಂದ ಹಿಂದೆ ಸರಿಯುತ್ತಿದೆ. ಈ ಸಮಸ್ಯೆಗಳನ್ನು ಮೊದಲು ಪರಿಹರಿಸಬೇಕು ಎನ್ನುವುದು ನನ್ನ ನಿಲುವು ಎಂದು ಹೇಳಿದರು.

ಚೀನಾದ ಆಕ್ರಮಣಕಾರಿ ನೀತಿಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದುರ್ಬಲ ನಿಲುವನ್ನು ಹೊಂದಿರುವುದರ ವಿರುದ್ಧ ನಾನು ತೀವ್ರ ಅಸಮಾಧಾನ ಹೊಂದಿದ್ದೇನೆ. ಉತ್ತರಾಖಂಡದಲ್ಲಿ ಪುರಾತನ ದೇವಾಲಯಗಳನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳುತ್ತಿರುವ ಕ್ರಮಗಳ ವಿರುದ್ಧ ಹೋರಾಡಿದ್ದೇನೆ. ರಾಮಸೇತು  ಒಡೆಯುತ್ತಿರುವುದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದೇನೆ. ನನ್ನ ಅಸಮಾಧಾನಗಳನ್ನು ಹಲವಾರು ಬಾರಿ ಪತ್ರದ ಮೂಲಕ ಗಮನಕ್ಕೆ ತಂದಿದ್ದೇನೆ ಎಂದು ಅವರು ಹೇಳಿದರು.

ನನಗೆ ಮೋದಿಯ ನೀತಿಯ ಬಗ್ಗೆ ಅಸಮಾಧಾನವಿದೆ. ಆದರೆ, ಬಿಜೆಪಿಯ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ಹಾಗಾಗಿ ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಇನ್ನು ಮುಂದೆಯೂ ಬಿಜೆಪಿಯಲ್ಲಿಯೇ ಮುಂದುವರಿಯುತ್ತೇನೆ ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಡು ರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್, ಕಂಡೆಕ್ಟರ್ ನಡುವೆ ಹೊಡೆದಾಟ! | ವಿಡಿಯೋ ವೈರಲ್

ಸರ್ಕಾರಿ ಶಾಲೆಗಳ ಹೀನಾಯ ಸ್ಥಿತಿಯ ಬಗ್ಗೆ ಧ್ವನಿ ಎತ್ತದ ಸ್ವಾಮೀಜಿಗಳು ಮೊಟ್ಟೆಗೆ ವಿರೋಧ ಮಾಡ್ತಿದ್ದಾರೆ!

ಕಾಲಿನಲ್ಲಿ ವೈಡ್ ಬಾಲ್ ಎಂದು ಸೂಚಿಸಿದ ಅಂಪೈರ್: ಬಿದ್ದು ಬಿದ್ದು ನಕ್ಕ ನೆಟ್ಟಿಗರು

ಗಗನಕ್ಕೇರಿದ ಟೊಮೆಟೋ ಬೆಲೆ: ಗ್ರಾಹಕನ ಜೇಬಿಗೆ ಕತ್ತರಿ ಹಾಕುತ್ತಿರುವ ತರಕಾರಿ!

ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು | ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬಿಜೆಪಿಗೆ ಯಾರ ಜೊತೆಗೂ ಮೈತ್ರಿಯ ಅಗತ್ಯವಿಲ್ಲ: ವಿ.ಶ್ರೀನಿವಾಸ್ ಪ್ರಸಾದ್

ಇತ್ತೀಚಿನ ಸುದ್ದಿ