ದಿಲ್ಲಿಯಲ್ಲಿ ಬಿಜೆಪಿ ಗೆಲುವಿನ ಕುಣಿತ: ಪ್ರಧಾನಿ ಮೋದಿಗೆ ದಿಲ್‌ ಖುಷ್

08/02/2025

ಪ್ರಧಾನಿ ನರೇಂದ್ರ ಮೋದಿ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಶ್ಲಾಘಿಸಿದ್ದು, ಅಭಿವೃದ್ಧಿ ಮತ್ತು ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ. ಚುನಾವಣೋತ್ತರ ಫಲಿತಾಂಶಗಳು ದೆಹಲಿತಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ನುಡಿದಿದ್ದ ಭವಿಷ್ಯ ನಿಜವಾಗಿದ್ದು ನಿರೀಕ್ಷೆಗಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ”ಬಿಜೆಪಿಗೆ ಐತಿಹಾಸಿಕ ಗೆಲುವು ನೀಡಿದ್ದಕ್ಕಾಗಿ ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ಧನ್ಯವಾದಗಳು ಮತ್ತು ಅಭಿನಂದನೆಗಳು.

ಹೃದಯಾಂತರಾಳದಿಂದ ನಾನು ನಿಮಗೆ ಕೃತಜ್ಞನಾಗಿದ್ದೇನೆ, ದೆಹಲಿಯ ಸರ್ವತೋಮುಖ ಅಭಿವೃದ್ಧಿ ಮಾಡಲು ಮತ್ತು ಅದರ ಜನರ ಜೀವನವನ್ನು ಉತ್ತಮಗೊಳಿಸಲು ಸಿಗುವ ಯಾವುದೇ ಅವಕಾಶವನ್ನು ನಾವು ಬಿಡುವುದಿಲ್ಲ ಎಂದು ಭರವಸೆ ಕೊಡುತ್ತಿದ್ದೇನೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ದೆಹಲಿ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಹೇಳಿದರು.

“ಇಷ್ಟು ದೊಡ್ಡ ಗೆಲುವು ಪಡೆಯಲು ಹಗಲು ಇರುಳು ಎನ್ನದೆ ಶ್ರಮಿಸಿದ ಬಿಜೆಪಿಯ ನನ್ನ ಎಲ್ಲಾ ಕಾರ್ಯಕರ್ತರ ಬಗ್ಗೆ ತುಂಬಾ ಹೆಮ್ಮೆಯಾಗುತ್ತದೆ. ಈಗ ನಾವು ದೆಹಲಿಯ ಜನರ ಸೇವೆ ಮಾಡಲು ಇನ್ನಷ್ಟು ಹೆಚ್ಚು ಕೆಲಸ ಮಾಡುತ್ತೇವೆ” ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಎರಡು ದಶಕಗಳ ಬಳಿಕ ಬಿಜೆಪಿ ದೆಹಲಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version