ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ತಂದೆ ನಿಧನ - Mahanayaka
2:02 PM Thursday 6 - November 2025

ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ತಂದೆ ನಿಧನ

anand alwa
31/10/2023

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ(106) ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರು ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು, ಓರ್ವ ಪುತ್ರಿ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.

ನಳಿನ್‌ ಕುಮಾರ್ ಸಂತಾಪ:

ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರ ನಿಧನದಿಂದ ಅವಿಭಜಿತ ದ.ಕ.ಜಿಲ್ಲೆ ಆದರ್ಶ ಕೃಷಿಕರೋರ್ವರನ್ನು ಕಳೆದುಕೊಂಡಿದೆ. ಕಂಬಳ ಸಹಿತ ತುಳುನಾಡಿನ ಸಂಪ್ರದಾಯ, ಸಾಂಸ್ಕೃತಿಕ ಹಾಗೂ ಶಿಕ್ಷಣ  ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅವರ ದೇಶಪ್ರೇಮ , ಸರಳ ಸಜ್ಜನಿಕೆಯ ವ್ಯಕ್ತಿತ್ವ ಸಮಾಜಕ್ಕೆ ಸದಾ ಮಾದರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್‌ ಕುಮಾರ್ ಕಟೀಲ್ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ