ಸೂಚನೆ ಕೊಡಲ್ಲ, ಎಚ್ಚರಿಕೆ ಕೊಡ್ತಾ ಇದ್ದೇನೆ, ಮುಂಗಾರು ಶುರುವಾಗ್ತಿದೆ ಕ್ರಮವಹಿಸಿ: ಸಿದ್ದರಾಮಯ್ಯ ಖಡಕ್ ಸೂಚನೆ - Mahanayaka
5:24 AM Saturday 18 - October 2025

ಸೂಚನೆ ಕೊಡಲ್ಲ, ಎಚ್ಚರಿಕೆ ಕೊಡ್ತಾ ಇದ್ದೇನೆ, ಮುಂಗಾರು ಶುರುವಾಗ್ತಿದೆ ಕ್ರಮವಹಿಸಿ: ಸಿದ್ದರಾಮಯ್ಯ ಖಡಕ್ ಸೂಚನೆ

siddaramaiah
23/05/2023

ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ  ಎಂದು ನೂತನ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.


Provided by

ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳ ಎಚ್ಚರಿಕೆ ನೀಡಿದ್ದು, ತಕ್ಷಣದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆಗಳು:

ರಾಜ್ಯದ ಕೆಲವು ಭಾಗದಲ್ಲಿ ಮಳೆ ಪ್ರಾರಂಭ, ಬಿತ್ತನೆ ಪ್ರಾರಂಭ. ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು.

ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವು ಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ.

ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು.

ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು.

ಜಿಲ್ಲಾಧಿಕಾರಿಗಳು, ಸಿಈಓ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು.

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ