ಮುಂಗಾರು ದುರ್ಬಲಗೊಳ್ಳುತ್ತಿದೆ: ಮಳೆ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ: ಹೀಗಿದೆ ಹವಾಮಾನ ವರದಿ
ಆಗಸ್ಟ್ 8ರವರೆಗಿನ ಹವಾಮಾನ ಇಲಾಖೆ ವರದಿ ಪ್ರಕಟಗೊಂಡಿದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚೆನೆ ಇದೆ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. (ಮುನ್ಸೂಚನೆಯಲ್ಲಿ ಉಡುಪಿ — ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು)
ಕೊಡಗು, ಹಾಸನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೂ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ದುರ್ಬಲಗೊಳ್ಳುತ್ತಿದೆ. ಈಗಿನಂತೆ ಆಗಸ್ಟ್ 12 ಅಥವಾ 13ರ ಹೊತ್ತಿಗೆ ಭಾರತದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ದುರ್ಬಲಗೊಳ್ಳಲಿದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ತುಂತುರು ಮಳೆಗೆ ಸೀಮಿತವಾಗುವ ಲಕ್ಷಣಗಳಿವೆ. ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಉತ್ತರ ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

























