ಕೆಲವೇ ಗಂಟೆಗಳಲ್ಲಿ ದೇಶಕ್ಕೆ ಮುಂಗಾರು ಮಳೆ ಆಗಮನ: ಈ ರಾಜ್ಯಗಳಲ್ಲಿ ಮಳೆ ಆರಂಭ!

ಕೇರಳದ ಕರಾವಳಿ ಮತ್ತು ಈಶಾನ್ಯದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಅಪ್ಪಳಿಸಲಿದ್ದು, ಕೆಲವೇ ಗಂಟೆಗಳಲ್ಲಿ ಮುಂಗಾರು ಆಗಮಿಸಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಮೇ 31 ರೊಳಗೆ ಕೇರಳಕ್ಕೆ ಮುಂಗಾರು ಮಳೆ ಎಂಟ್ರಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿ ಜೂನ್ 5ರಿಂದ ಮುಂಗಾರು ಮಳೆ ಆರಂಭವಾಗಲಿದೆ.
ಹವಾಮಾನ ಇಲಾಖೆ ನೀಡಿರುವ ಅಂಕಿ-ಅಂಶಗಳ ಪ್ರಕಾರ.. ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ತ್ರಿಪುರಾ, ನಾಗಾಲ್ಯಾಂಡ್, ಮೇಘಾಲಯ, ಮಿಜೋರಾಂ, ಮಣಿಪುರ ಮತ್ತು ಅಸ್ಸಾಂನಲ್ಲಿ ಜೂನ್ ಐದರಿಂದ ಮುಂಗಾರು ಮಳೆ ಶುರುವಾಗಲಿದೆ.
ಈ ಅವಧಿಯಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳಾದ ಮಾಲ್ಡೀವ್ಸ್, ಕೊಮೊರಿನ್, ಲಕ್ಷದ್ವೀಪ, ಮಧ್ಯ ಬಂಗಾಳ ಕೊಲ್ಲಿ, ಈಶಾನ್ಯ ಬಂಗಾಳ ಕೊಲ್ಲಿ ಮತ್ತು ಆಗ್ನೇಯ ಭಾರತದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068