ಮೂಡುಬಿದಿರೆ: ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬಂಧನ
ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿವಾಹಿತ ವ್ಯಕ್ತಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆ ಸಮೀಪದ ನಿವಾಸಿ, ಲಾರಿ ಚಾಲಕನಾಗಿರುವ ವಿವಾಹಿತ ಲೋಕೇಶ್ (35) ಬಂಧಿತ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಲೋಕೇಶ್ ಸಂತ್ರಸ್ತ ವಿದ್ಯಾರ್ಥಿನಿಯ ಪರಿಚಯಸ್ಥನಾಗಿದ್ದ ಎನ್ನಲಾಗಿದೆ. ಕಾಲೇಜು ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಯುವತಿಯನ್ನು ಈತ ತನ್ನ ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದಾನೆ. ದಾರಿ ಮಧ್ಯೆ ತಾನು ಹೊಸದಾಗಿ ನಿರ್ಮಿಸುತ್ತಿರುವ ಮನೆಯನ್ನು ತೋರಿಸುವುದಾಗಿ ಹೇಳಿ, ಅವಳನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























