ಮೂಡ್ನಾಕೂಡು ಚಿನ್ನಸ್ವಾಮಿಯವರ 70ನೇ ಜನ್ಮದಿನಾಚರಣೆ ಹಾಗೂ ಪುಸ್ತಕ ಬಿಡುಗಡೆ ಸಮಾರಂಭ
ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕನ್ನಡದ ಪ್ರಖ್ಯಾತ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿಯವರ 70ನೇ ಜನ್ಮದಿನಾಚರಣೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ “ಧಮ್ಮಯಾನ”, “ಆ ಮಹಾಮುಗುಳ್ನಗೆ”, “ಉರಿವ ಕಿಚ್ಚಿಗೆ ಮೈಯೆಲ್ಲ ಬಾಯಿ” ಎಂಬ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ರಾಜ್ಯಸಭಾ ಸದಸ್ಯರಾದ ಡಾ. ಎಲ್. ಹನುಮಂತಯ್ಯನವರು ವಹಿಸಿದ್ದರು. ಕೃತಿಗಳನ್ನು ಅಗ್ರಹಾರ ಕೃಷ್ಣಮೂರ್ತಿಯವರು ಬಿಡುಗಡೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪ, ವಿಮರ್ಶಕ ರಘುನಾಥ ಚ.ಹ., ಕಾರ್ಯಕ್ರಮದ ಸಂಘಟಕರಾದ ಅಕ್ಕ ಐಎಎಸ್ ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್, ಕಿ.ರ. ಪ್ರಕಾಶನದ ಧನಂಜಯ್, ಆಕೃತಿ ಪ್ರಕಾಶನದ ಗುರುಪ್ರಸಾದ್ ಮುಂತಾದವರು ಹಾಜರಿದ್ದರು.
ಡಾ. ಚಿನ್ನಸ್ವಾಮಿಯವರ ದಂಪತಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಬಾಲು ಜಂಬೆಯವರ ಜಂಬೆ ವಾದನ, ಸೋಸಲೆಗಂಗಾಧರ ತಂಡದ ಹಾಡುಗಳು ಹಾಗೂ ಅಕ್ಕ ಐಎಎಸ್ ಅಕಾಡೆಮಿಯ ಸಿಬ್ಬಂದಿಗಳಿಂದ ಬಡಿಸಲಾದ ಊಟವು ಕಾರ್ಯಕ್ರಮಕ್ಕೆ ಮತ್ತಷ್ಟು ಸೊಗಸು ನೀಡಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: