ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣ: ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶ

chikkamagaluru crime news
09/07/2025

ಚಿಕ್ಕಮಗಳೂರು(Mahanayaka):   ಮೊರಾರ್ಜಿ‌ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ  ಪ್ರಕರಣವನ್ನು  ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ.

ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶೆ ಶೋಭಾ ಅವರ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಲಾಗಿದ್ದು,  ಜಿಲ್ಲಾ ಸಮನ್ವಯ ಅಧಿಕಾರಿ ಶೈಲಾ ಅವರನ್ನ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿ,  ಒಂದು ತಿಂಗಳಲ್ಲಿ ವರದಿ ಸಲ್ಲಿಸಲು ಆದೇಶ ಮಾಡಲಾಗಿದೆ.

ಕೊಪ್ಪ ಪಟ್ಟಣದ ಮೊರಾರ್ಜಿ ಶಾಲೆಯಲ್ಲಿ 2023 ಜುಲೈ 27ರಂದು ಅಮೂಲ್ಯ, 2025 ಜೂನ್ 29ರಂದು ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದರು.  9ನೇ ತರಗತಿ ಶಮಿತಾ ವಾಶ್ ರೂಂ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಳು.  ಇಬ್ಬರು ವಿದ್ಯಾರ್ಥಿನಿಯರು ಒಂದೇ ರೂಂನ ಒಂದೇ ಕಬ್ಬಿಣಕ್ಕೆ ಒಂದೇ ಶೈಲಿಯಲ್ಲಿ ನೇಣು ಹಾಕಿಕೊಂಡಿದ್ದರು.

ಈ ಆತ್ಮಹತ್ಯೆ ಪ್ರಕರಣ ಸಂಬಂಧ ಸಾರ್ವಜನಿಕರು ತೀವ್ರ ಅನುಮಾನ ವ್ಯಕ್ತಪಡಿಸಿದ್ದರು. ಈ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನ ನಡೆಸಿ, ಒತ್ತಾಯಿಸಲಾಗಿತ್ತು. ಸದ್ಯ ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕರಿಂದ ತನಿಖೆಗೆ ಆದೇಶವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version