ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿಯ ದಾರುಣ ಸಾವು - Mahanayaka
3:40 AM Monday 15 - September 2025

ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿಯ ದಾರುಣ ಸಾವು

rama nagar
21/09/2023

ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ರಾಮನಗರದ ಹೊಸೂರು ಗೊಲ್ಲಳ್ಳಿಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿ ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ.


Provided by

ವಿದ್ಯಾರ್ಥಿ ಕೌಶಿಕ್ ಗೌಡ (12) ಮೃತ ವಿದ್ಯಾರ್ಥಿಯಾಗಿದ್ದು, ನೀರು ಸಂಗ್ರಹಕ್ಕೆ ತಡೆಗೋಡೆ ನಿರ್ಮಿಸಲಾಗಿತ್ತು. ನೀರಿನ ಪ್ರಮಾಣ ತಡೆಯಲಾಗದೇ ಗೋಡೆ ಕುಸಿದಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಿಗ್ಗೆ 8:30ರ ಸುಮಾರಿಗೆ ತೊಟ್ಟಿ ಬಳಿ ಕೌಶಿಕ್ ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ಮುಖ ತೊಳೆಯುತ್ತಿದ್ದರು. ಆಗ, ಐದು ಅಡಿ ಎತ್ತರವಿರುವ ತೊಟ್ಟಿಯ ಶಿಥಿಲಗೊಂಡ ಗೋಡೆ ವಿದ್ಯಾರ್ಥಿಗಳ ಮೇಲೆ ಉರುಳಿದೆ.

ಮೃತ ವಿದ್ಯಾರ್ಥಿಯ ಮೃತದೇಹವನ್ನು ದಯಾನಂದ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಮತ್ತೊಬ್ಬ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ