ಮತ್ತಷ್ಟು ಚುರುಕಾದ ಮಳೆ: ಆಗಸ್ಟ್​ 19ರ ನಂತರ ಈ ಪ್ರದೇಶಗಳಲ್ಲಿ ಮಳೆ ಪ್ರಮಾಣ ಏರಿಕೆ - Mahanayaka
12:30 PM Wednesday 22 - October 2025

ಮತ್ತಷ್ಟು ಚುರುಕಾದ ಮಳೆ: ಆಗಸ್ಟ್​ 19ರ ನಂತರ ಈ ಪ್ರದೇಶಗಳಲ್ಲಿ ಮಳೆ ಪ್ರಮಾಣ ಏರಿಕೆ

rain
15/08/2025

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವುದರಿಂದ ದೇಶದ ಬಹುತೇಕ ಕಡೆಗಳಲ್ಲಿ ವರ್ಷಧಾರೆ ಮುಂದುವರೆದಿದೆ. ಕರ್ನಾಟಕದಲ್ಲೂ ಮಳೆ ಆರ್ಭಟ ಜೋರಾಗಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಆಗಸ್ಟ್​ 19ರ ನಂತರ ಮಳೆ ಮತ್ತಷ್ಟು ಹೆಚ್ಚಾಗಲಿರುವ ಕಾರಣ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಗದಗ ಜಿಲ್ಲೆಯಲ್ಲಿಯೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ.

ಆಗುಂಬೆ, ಮಂಕಿ, ಕುಂದಾಪುರ, ಶಕ್ತಿನಗರ, ಕಕ್ಕೇರಿ, ಕುಮಟಾ, ಗೋಕರ್ಣ, ಸಿದ್ದಾಪುರ, ಕದ್ರಾ, ಬೆಳ್ತಂಗಡಿ, ಉಪ್ಪಿನಂಗಡಿ, ಮಾಣಿ, ಗೇರುಸೊಪ್ಪ, ಮಂಗಳೂರು, ಕಾರ್ಕಳ, ಉಡುಪಿ, ಕೋಟಾ, ಸುಳ್ಯ, ಅಂಕೋಲಾ, ಮುಂಡಗೋಡು, ಆಳಂದ, ಗುತ್ತಲ್, ಜಗಳೂರು, ಚನ್ನಗಿರಿ, ದಾವಣಗೆರೆ, ಹೊನ್ನಾವರ, ಬನವಾಸಿ, ಹರಪನಹಳ್ಳಿ, ಕಳಸ, ಶೃಂಗೇರಿ, ತರೀಕೆರೆ, ಹುಂಚದಕಟ್ಟೆ, ಹೊಳಲ್ಕೆರೆ, ಭರಮಸಾಗರ, ಲಕ್ಷ್ಮೇಶ್ವರ, ಕುಂದಗೋಳ, ಶಿರಹಟ್ಟಿ, ಹಿರೆಕೆರೂರು, ರಾಯಚೂರು, ಹಿರಿಯೂರು, ಟಿ.ಜಿ.ಹಳ್ಳಿ, ಆನವಟ್ಟಿ, ಬರಗೂರು, ಕುಣಿಗಲ್, ಗುಬ್ಬಿ, ಎನ್.​ಆರ್.​ಪುರ, ಅಜ್ಜಂಪುರ, ರಾಯಲ್ಪಾಡು, ಕೊಪ್ಪ, ಭಾಗಮಂಡಲ, ಹೊನ್ನಾಳಿ ಹಾಗೂ ಕೊಪ್ಪದಲ್ಲಿ ಗುರುವಾರ ಮಳೆ ಸುರಿದಿದೆ.

ಬೆಂಗಳೂರಿನಲ್ಲೂ ಕೂಡ ನಿನ್ನೆ ಇಡೀ ದಿನ ಜಡಿ ಮಳೆಯಾಗಿದೆ. ಇಂದೂ ಸಹ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್ ​​ಎಎಲ್ ​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ