1 ಸಾವಿರಕ್ಕೂ ಹೆಚ್ಚು ಸರ್ಕಾರಿ ನರ್ಸ್ ಹುದ್ದೆಗಳು: ಇಲ್ಲಿದೆ ವಿವರ - Mahanayaka

1 ಸಾವಿರಕ್ಕೂ ಹೆಚ್ಚು ಸರ್ಕಾರಿ ನರ್ಸ್ ಹುದ್ದೆಗಳು: ಇಲ್ಲಿದೆ ವಿವರ

nursing
09/08/2024

Government Nurse’s Recruitment 2024 – ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿ ಖಾಲಿ ಇರುವಂತಹ ಒಟ್ಟು 1,850 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಂಡಿದೆ.

ಕರ್ನಾಟಕ ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಖಾಲಿ ಇರುವಂತಹ ನರ್ಸ್ ಹುದ್ದೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು, ನೇಮಕಾತಿಯ ನಿಯಮಗಳಲ್ಲಿ ಬದಲಾವಣೆ ಮಾಡಿ ಇನ್ನು ಮುಂದೆ ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಲಿದೆ.

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ:

* ನರ್ಸ್ ಹುದ್ದೆಗಳು – 1,200

* ಸಹಾಯಕ ಪ್ರಾಧ್ಯಾಪಕರು ಹುದ್ದೆಗಳು – 650

ಎರಡು ಹುದ್ದೆಗಳನ್ನು ಸೇರಿ ಒಟ್ಟು 1,850 ಹುದ್ದೆಗಳು ಖಾಲಿ ಇವೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆಯ ವಿವರ :

ಸರ್ಕಾರಿ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು

  1. Sc ನರ್ಸಿಂಗ್ ಪದವಿ ಮುಗಿಸಿರಬೇಕು ಅಥವಾ ಡಿಪ್ಲೋಮಾ ಇನ್ ನರ್ಸಿಂಗ್ ಮುಗಿಸಿದವರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಈ ವಿದ್ಯಾರ್ಥಿಯ ಜೊತೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕ ಮತ್ತು ಭಾರತ ಸರ್ಕಾರದ ನರ್ಸಿಂಗ್ ಕೌನ್ಸಿಲ್ ನಿಂದ ನೊಂದಣಿ ಪಡೆದಿರುವಂತವರು ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆಯಾದವರಿಗೆ ಸಿಗುವ ವೇತನ — ಸರ್ಕಾರಿ ನರ್ಸ್ ಆಗಿ ಆಯ್ಕೆ ಆಗುವಂತಹ ಅಭ್ಯರ್ಥಿಗಳಿಗೆ 31,100 ರೂ. ಯಿಂದ 66,800ರೂ. ವರೆಗೆ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

 ಈ ನೇಮಕಾತಿಗಾಗಿ ಅಧಿಸೂಚನೆ ಯಾವಾಗ ಬಿಡುಗಡೆಯಾಗಲಿದೆ?

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತಹ ನರ್ಸ್ ಹುದ್ದೆಗಳು ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯು ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಅಧಿಸೂಚನೆಯೂ ಶೀಘ್ರದಲ್ಲಿಯೇ ಹೊರಬೀಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ