ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ 4 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ!
Karnataka Police Department Recruitment : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 4,115 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆಯಿಂದ ಅನುಮೋದನೆ ಕೂಡ ದೊರೆತಿದೆ. ಯಾವ ಯಾವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂಬ ಅಧಿಕೃತ ಮಾಹಿತಿಯು ಇಲ್ಲಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡೆಪ್ಯುಟಿ ಸಬ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಖಾಲಿ ಇರುವ ಹುದ್ದೆಗಳ ವಿವರವು ಈ ಕೆಳಗಿನಂತಿದೆ.
KSP Post Details: ಹುದ್ದೆಗಳ ವಿಂಗಡಣೆ :
* ಪೊಲೀಸ್ ಸಬ್ ಇನ್ಸ್ಪೆಕ್ಟರ್ : 600 ಹುದ್ದೆಗಳು
* ಡೆಪ್ಯೂಟಿ ಸಬ್ ಇನ್ಸ್ಪೆಕ್ಟರ್ : 15 ಹುದ್ದೆಗಳು
* ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ : 2,000 ಹುದ್ದೆಗಳು
* ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ : 1,500 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳು:
ಸಶಸ್ತ್ರ ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕುಕು ಹಾಗೂ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ಪಾಸ್ ಆಗಿರಬೇಕು. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಬೇಕು.
ನೇಮಕಾತಿ ಯಾವಾಗ?
ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಈಗಾಗಲೇ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಗೃಹ ಇಲಾಖೆಯಿಂದ ಆದೇಶ ಬಂದರೆ, ಬಂದ 40 ದಿನದ ಒಳಗಾಗಿ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: