ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ಸಂಕಷ್ಟ: ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ಸಂಕಷ್ಟ ಎದುರಾಗಿದ್ದು, ಇದೀಗ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಇದು ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎರಡನೇ ಪ್ರಕರಣವಾಗಿದೆ. ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳು ವಿಡಿಯೋದಲ್ಲಿರುವ ಕೆಲವು ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಅಧಿಕಾರಿಗಳಿಗೆ ನೀಡಿರುವ ಹೇಳಿಕೆಯನ್ನು ಆಧರಿಸಿ, ಹೊಸದಾಗಿ ಐಪಿಸಿ ಸೆಕ್ಷನ್ 376 ಅನ್ನು ಸೇರ್ಪಡೆಗೊಳಿಸಲಾಗಿದೆ.
ಪ್ರಜ್ವಲ್ ರೇವಣ್ಣ ಹಲವು ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. ಸಿಆರ್ ಪಿಸಿ 164 ಅಡಿಯಲ್ಲಿ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತೆಯ ಮಾಹಿತಿಯನ್ನು ಗೌಪ್ಯವಾಗಿರಿಸಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ 376(2) ಎನ್, 506, 354 ಎ1, 354ಬಿ, 354ಸಿ ಹಾಗೂ ಐಟಿ ಕಾಯ್ದೆ ಅಡಿ ಎಫ್ ಐಆರ್ ದಾಖಲಾಗಿದೆ.
ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್ ಐಟಿ ನೋಟಿಸ್ ನೀಡಿದೆ. ಆದರೆ ಎಸ್ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ತಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97