ನಿರಂತರ ಮಳೆಯಿಂದಾಗಿ ಉಡುಪಿಯಲ್ಲಿ ಬಹುತೇಕ ಪ್ರದೇಶ ಜಲಾವೃತ: ಹಲವು ಮನೆಗಳಿಗೆ ನುಗ್ಗಿದ ನೀರು - Mahanayaka
11:55 AM Wednesday 22 - October 2025

ನಿರಂತರ ಮಳೆಯಿಂದಾಗಿ ಉಡುಪಿಯಲ್ಲಿ ಬಹುತೇಕ ಪ್ರದೇಶ ಜಲಾವೃತ: ಹಲವು ಮನೆಗಳಿಗೆ ನುಗ್ಗಿದ ನೀರು

udupi
06/07/2023

ಉಡುಪಿ: ನಿರಂತರವಾಗಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಉಡುಪಿ ನಗರದ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದ್ದು ಹಲವು ಮನೆಗಳಿಗೆ ನೀರು ನುಗ್ಗಿವೆ.  ಇಲ್ಲಿನ ನೂರಾರು ಕುಟುಂಬಗಳನ್ನು ಸ್ಥಳಾಂತರಗೊಳಿಸುವ ಕಾರ್ಯ ಮುಂದುವರಿದಿದೆ.

ನಗರದ ಬೈಲಕೆರೆ ಮೂಡನಿಡಂಬೂರು ಕೊಡವೂರು ನಿಟ್ಟೂರು, ಕಲ್ಸಂಕ ತೆಂಕಪೇಟೆ ಸೇರಿ ಹಲವು ಪ್ರದೇಶಗಳಲ್ಲಿ ನೆರೆ ಕಂಡು ಬಂದಿದ್ದು ನೂರಾರು ಮನೆಗಳು ಜಲ ದಿಗ್ಬಂಧನಕ್ಕೆ ಒಳಗಾಗಿದೆ. ಬೆಳಗಿನ ಜಾವ ನೀರಿನ ಪ್ರಮಾಣ ದಲ್ಲಿ ಏರಿಕೆ ಕಂಡಿದ್ದು ಕೂಡಲೇ ಮಾಹಿತಿ ತಿಳಿದ ಅಗ್ನಿಶಾಮಕ ದಳ ಉಡುಪಿ ನಗರಸಭೆ ಕಾರ್ಯಪಡೆ ಸ್ಥಳಕ್ಕೆ ಆಗಮಿಸಿ, ಬೋಟಿನ ಮೂಲಕ ಹಾಗೂ  ಹಗ್ಗದ ಸಹಾಯದಿಂದ ಮನೆ ಮಂದಿಯನ್ನು ರಕ್ಷಿಸುವ ಕಾರ್ಯ ನಡೆಸಿದ್ದಾರೆ. ಇವರೊಂದಿಗೆ ಸ್ಥಳೀಯರು ಕೂಡ ಕೈಜೋಡಿಸಿಕೊಂಡಿದ್ದಾರೆ.

ನೆರೆಪೀಡಿತ ಪ್ರದೇಶಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್, ಎಸ್ ಪಿ ಅಕ್ಷಯ್ ಹಾಕೇ ಮಚ್ಚಿಂದ್ರ, ನಗರಸಭೆ ಪೌರಾಯುಕ್ತ ಆರ್ ಪಿ ನಾಯಕ್ ಸೇರಿದಂತೆ ಹಲವು ಅಧಿಕಾರಿಗಳು ತೆರಳಿ ರಕ್ಷಣಾ ಕಾರ್ಯದಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ