23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಆರೋಪಿ ಅಜರುದ್ದೀನ್ ಅರೆಸ್ಟ್
23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿ ಅಜರುದ್ದೀನ್ ಎಂಬಾತನನ್ನು ಮಂಗಳೂರು ನಗರದ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟು ಇದೆ.
ಈತನನ್ನು ಮಂಗಳೂರು ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್ ಕುಮಾರ್ರವರ ನಿರ್ದೇಶನದಂತೆ ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕ ಮಲ್ಲಿಕಾರ್ಜುನ್ ಸಿಬ್ಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರಿದ್ದ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಯು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























