4:09 AM Sunday 14 - September 2025

ಫ್ಯಾನ್, ಕಿಟಕಿಗೆ ನೇಣು ಬಿಗಿದು ತಾಯಿ—ಮಗ ಸಾವಿಗೆ ಶರಣು

udupi
18/05/2023

ಉಡುಪಿ: ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದ ತಾಯಿ ಮಗ ಸಾವಿಗೆ ಶರಣಾದ ಘಟನೆ ಉಡುಪಿ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಎಡ್ಲಿನ್ ಡೆಲಿಶಾ ಅಮ್ಮನ್ನ(83) ಹಾಗೂ ಅವರ ಮಗ ಸಬೆಸ್ಟಿನ್ ಅಮಿತ್ ಅಮ್ಮನ್ನ(46) ಮೃತಪಟ್ಟ ತಾಯಿಮಗ. ಮನೆಯಲ್ಲಿ ಇಬ್ಬರೇ ವಾಸ ಮಾಡಿಕೊಂಡಿದ್ದ ಇವರು, ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಫ್ಯಾನ್ ಮತ್ತು ಕಿಟಕಿಗೆ ನೇಣು ಬಿಗಿದು ಸಾವಿಗೆ ಶರಣಾದ್ದಾರೆ ಎಂದು ಮೂಲಗಳು ತಿಳಿಸಿವೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಎಸ್ಸೈ ಮಹೇಶ್ ಪಿ.ಎಂ., ಎಎಸ್ಸೈ ವಿಜಯ, ಹೆಡ್ ಕಾನ್ಸ್‌ಸ್ಟೇಬಲ್ ಮರಿಗೌಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಹಕರಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version