8:05 AM Saturday 25 - October 2025

ನೇಜಾರುನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ: ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ

lakshmi hebbalkar
13/11/2023

ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ. ಅಲ್ಲದೆ, ಅವರಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಪ್ರಕರಣ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಪತ್ತೆ ಮಾಡುವ ವಿಶ್ವಾಸವನ್ನು ಪೋಲೀಸ್ ವರಿಷ್ಠಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಹತ್ಯೆ ನಡೆಸಲಾಗಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸಚಿವರು ಇದೀಗ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version