ಕೆರೆಗೆ ಬಿದ್ದ ಮಕ್ಕಳಿಬ್ಬರನ್ನು ರಕ್ಷಿಸಿ ಸಾವನ್ನಪ್ಪಿದ ತಾಯಿ - Mahanayaka

ಕೆರೆಗೆ ಬಿದ್ದ ಮಕ್ಕಳಿಬ್ಬರನ್ನು ರಕ್ಷಿಸಿ ಸಾವನ್ನಪ್ಪಿದ ತಾಯಿ

tumakuru
02/07/2023

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಇಬ್ಬರು ಮಕ್ಕಳನ್ನು ರಕ್ಷಿಸಿ, ಈಜು ಬಾರದ ತಾಯಿಯೊಬ್ಬಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ರಥಸಂದ್ರ ಗ್ರಾಮದ ಕೆರೆಯಲ್ಲಿ ನಡೆದಿದೆ.

ಮನು(30) ಮೃತ ದುರ್ದೈವಿಯಾಗಿದ್ದಾರೆ. ಇಬ್ಬರು ಮಕ್ಕಳೊಂದಿಗೆ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭದಲ್ಲಿ ತನ್ನ ಇಬ್ಬರು ಮಕ್ಕಳು ಕೆರೆ ದಡದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಇಬ್ಬರು ಮಕ್ಕಳು ಕೆರೆಗೆ ಜಾರಿ ಬಿದ್ದಿದ್ದಾರೆ.

ನಂತರ ಸಮೀಪದಲ್ಲಿದ್ದ ತಾಯಿ ಮನು ಕೆರೆಗೆ ಬಿದ್ದು ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿದ್ದಾರೆ ಆದರೆ ತನಗೆ ಈಜು ಬಾರದ ಹಿನ್ನೆಲೆಯಲ್ಲಿ  ಮನು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾಳೆ.‌

ಮಕ್ಕಳಿಬ್ಬರಿಗೆ ಶಿರಾ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಶೀರಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ