6:26 PM Sunday 28 - September 2025

ಇಬ್ಬರು ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣು: ಪತಿ, ಅತ್ತೆ, ಅಜ್ಜಿಯ ಬಂಧನ

tumakuru
21/09/2025

ತುಮಕೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ  ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮೃತಪಟ್ಟ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇನ್ನಿಬ್ಬರು ಮಕ್ಕಳ ಜೊತೆಗೆ ಸರಿತಾ  ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದರು.

6 ವರ್ಷಗಳ ಹಿಂದೆ ಮದುವೆ:

ಕಡಪಲಕೆರೆ ಗ್ರಾಮದ ಸರಿತಾ ಅವರು 6 ವರ್ಷಗಳ ಹಿಂದೆ ಅದೇ ಗ್ರಾಮದ ಸಂತೋಷ ಎಂಬಾತನನ್ನು ವಿವಾಹವಾಗಿದ್ದರು. ಸಂತೋಷ್ ಆಟೋ ಚಾಲಕನಾಗಿದ್ದ. ಮದುವೆಯಾದ ದಿನದಿಂದಲೂ ಸಂತೋಷ್ ಮತ್ತು ಆತನ ತಾಯಿ, ಅಜ್ಜಿ  ಸರಿತಾಳಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು  ಎನ್ನುವ ಆರೋಪ ಕೇಳಿ ಬಂದಿದೆ.

ಕಿರುಕುಳಕ್ಕೆ ನೊಂದು ಆತ್ಮಹತ್ಯೆ:

ನಿನ್ನೆ ಮಧ್ಯಾಹ್ನ 2 ಗಂಟೆಯ ಸುಮಾರಿಗೆ  ಇಬ್ಬರು ಮಕ್ಕಳ ಜೊತೆಗೆ ಮಹಿಳೆ ಸರಿತಾ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಸದ್ಯ ಪತಿ, ಪತಿಯ ತಾಯಿ ಹಾಗೂ ಅಜ್ಜಿಯ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ತನಿಖೆಯ ನಂತರ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version