ಮುದ್ದೆಯಲ್ಲಿ ನಿದ್ದೆ ಮಾತ್ರೆ ಹಾಕಿ ಅತ್ತೆ ಕೊಲೆ: ಹೂತಿದ್ದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ

ಚಿಕ್ಕಮಗಳೂರು: ಮುದ್ದೆಯಲ್ಲಿ ನಿದ್ದೆ ಮಾತ್ರೆ ಹಾಕಿ ಅತ್ತೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿರೋ ಮೃತದೇಹ ತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಿರುವ ಘಟನೆ ನಟೆದಿದೆ.
ಅಜ್ಜಂಪುರ ತಾಲೂಕಿನ ತಡಗ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಸೊಸೆ ಹಾಗೂ ಆಕೆಯ ಪ್ರಿಯಕರನಿಂದ ಚಿನ್ನಾಭರಣ ಮತ್ತು ಟಿಟಿ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.
ಗಂಡನ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ಸೊಸೆ, 218 ಗ್ರಾಂ ಚಿನ್ನ, ಅಂದಾಜು 20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಳು. ಈ ಚಿನ್ನಾಭರಣ ಹಾಗೂ 16 ಲಕ್ಷ ಮೌಲ್ಯದ ಟಿಟಿ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.
ಘಟನೆ ಹಿನ್ನೆಲೆ:
ಅಜ್ಜಂಪುರ ತಾಲೂಕಿನ ತಡಗ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅತ್ತೆ ದೇವಿರಮ್ಮನಿಗೆ ನಿದ್ದೆ ಮಾತ್ರ ಹಾಕಿ ಸೊಸೆ ಆಶ್ವಿನಿ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿದ್ದಳು. ಆಗಸ್ಟ್ 10ರಂದು ಮೃತ ಅತ್ತೆ ದೇವಿರಮ್ಮ ಮೃತಪಟ್ಟಿದ್ದು, ಸಾವು ಸಹಜ ಸಾವು ಎಂದು ಭಾವಿಸಿ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದ್ದರು.
ಹಣ ನಾಪತ್ತೆ:
ಘಟನೆ ನಡೆದ ದಿನ ಮನೆಯ ಹಣ ನಾಪತ್ತೆಯಾಗಿತ್ತು. ಇದು ಗಮನಕ್ಕೆ ಬಂದ ನಂತರ ಪ್ರಕರಣ ದಾಖಲಾಗಿತ್ತು. ಪೊಲೀಸರ ತನಿಖೆ ವೇಳೆ ಸೊಸೆಯ ಕೃತ್ಯ ಬಯಲಾಗಿತ್ತು. 10 ದಿನದ ನಂತರ ಅಜ್ಜಂಪುರ ಪೊಲೀಸರಿಗೆ ದೂರು ನೀಡಲಾಗಿತ್ತು. ಗುರುವಾರ ಹೂತಿರೋ ಶವ ತೆಗೆದು ಮರಣೋತ್ತರ ಪರೀಕ್ಷೆಗೆ ನಿರ್ಧಾರ ಮಾಡಲಾಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD