ಬಾಲ್ಕನಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆಯ ಬೆನ್ನಲ್ಲೇ ಮಗುವಿನ ತಾಯಿ ಸಾವು!

chennai
20/05/2024

ಚೆನ್ನೈನ ಅಪಾರ್ಟ್ ಮೆಂಟ್ ನ ಬಾಲ್ಕನಿಯೊಂದರಿಂದ ಬೀಳುತ್ತಿದ್ದ ಮಗುವನ್ನು ರಕ್ಷಣೆ ಮಾಡುತ್ತಿರುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಇದೇ ಮಗುವಿನ ತಾಯಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಏಪ್ರಿಲ್ 28ರಂದು 8 ತಿಂಗಳ ಮಗು ಅಪಾರ್ಟ್ ಮೆಂಟ್ ನ ಮೇಲ್ಛಾವಣಿಯ ಶೀಟ್ ಮೇಲೆ ನೇತಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಸ್ಥಳೀಯರು ಹಾಗೂ ಅಪಾರ್ಟ್ ಮೆಂಟ್ ನಿವಾಸಿಗಳು ಸೇರಿ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಈ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿತ್ತು.

ಈ ಘಟನೆಯ ವೇಳೆ ಮಗುವನ್ನು ರಕ್ಷಣೆ ಮಾಡಿದವರನ್ನು ಸಾರ್ವಜನಿಕರು ಪ್ರಶಂಸಿಸಿದ್ದರು. ಕೆಲವರು ಮಗುವಿನ ತಾಯಿ ಮಗುವನ್ನು ಸರಿಯಾಗಿ ನೋಡಿಕೊಂಡಿಲ್ಲ ಎಂದು ಟೀಕೆ ವ್ಯಕ್ತಪಡಿಸಿದ್ದರು.

ಆದರೆ, ಈ ಘಟನೆ ಆಕಸ್ಮಿಕ, ಮಗುವಿನ ತಾಯಿ ಮಗುವನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು ಎಂದು ನೆರೆಹೊರೆಯವರು ತಿಳಿಸಿದ್ದರು.

ಘಟನೆಯ ನಂತರ ನೊಂದ ತಾಯಿ ರಮ್ಯಾ, ಕರಮಡೈನಲ್ಲಿರುವ ತನ್ನ ಪೋಷಕರ ಮನೆಗೆ ಹೋಗಿದ್ದರು. ಭಾನುವಾರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಮಗುವಿನ ತಾಯಿ ಸಾವಿಗೆ ಆಕೆಯನ್ನು ಅವಮಾನಿಸಿದವರೇ ಕಾರಣ ಎಂದು ಘಟನೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version