ಕುಡುಕ ಗಂಡನ ಕಿರುಕುಳದಿಂದ ಬೇಸತ್ತು ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ತಾಯಿ: ಮಗಳು ಸಾವು, ತಾಯಿ ಮಗನ ಸ್ಥಿತಿ ಗಂಭೀರ

ಚಾಮರಾಜನಗರ: ಕುಡುಕ ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ವಿಷ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ.
ಮಾದೇಶ್ ಎಂಬಾತನ ಪತ್ನಿ ಶೀಲಾ ಹಾಗೂ ಮಕ್ಕಳು ವಿಷ ಸೇವಿಸಿದವರಾಗಿದ್ದು, ವಿಷ ಸೇವಿಸಿದ ಪರಿಣಾಮ 8 ವರ್ಷದ ಮಗಳು ಸಿಂಧು ಸಾವನ್ನಪ್ಪಿದ್ದು, ಶೀಲಾ(25) ಹಾಗೂ ಪುತ್ರ ಯಶವಂತ (14)ನ ಸ್ಥಿತಿ ಗಂಭೀರವಾಗಿದೆ. ಇವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಮಾದೇಶ್ ಅವರು ಪ್ರತಿನಿತ್ಯ ಕುಡಿದು ಬರುತ್ತಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಗಂಡ ಹೆಂಡತಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ತಾಯಿ ಹಾಗೂ ಮಕ್ಕಳು ವಿಷ ಸೇವಿಸಿದ್ದಾರೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw