6:23 PM Sunday 28 - September 2025

2 ತಿಂಗಳ ಹೆಣ್ಣು ಮಗುವನ್ನು ಕಾಲುವೆಗೆ ಎಸೆದ ತಾಯಿ!

priyanka devi
21/09/2025

ಬಳ್ಳಾರಿ: 2 ತಿಂಗಳ ಮಗುವನ್ನು ತಾಯಿಯೇ ಕಾಲುವೆಗೆ ಎಸೆದು ಕೊಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ನಲ್ಲಿ ನಡೆದಿದೆ.

ಬಿಹಾರ ಮೂಲದ ಪ್ರಿಯಾಂಕಾ ದೇವಿ ಹಾಗೂ ಸರೋಜ್ ಕುಮಾರ್ ದಂಪತಿ ತೋರಣಗಲ್‌ ನಲ್ಲಿ ವಾಸವಾಗಿದ್ದರು. ಪತಿ ಖಾಸಗಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು.  ಈ ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಈ ಬಾರಿ ಮೂರನೇ ಬಾರಿಗೂ ಮತ್ತೊಂದು ಹೆಣ್ಣು ಮಗು ಜನಿಸಿತ್ತು.

ಆದ್ರೆ ಪತಿ ಮನೆಗೆ ಬಂದ ವೇಳೆ ಪ್ರಿಯಾಂಕಾ ದೇವಿ ಮಗು ನಾಪತ್ತೆಯಾಗಿದೆ ಎಂದು ಕಣ್ಣೀರು ಹಾಕಿದ್ದಳು. ಹೀಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ ನಂತರ ಪಯಿ ಸರೋಜ್ ಕುಮಾರ್ ತೋರಣಗಲ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿ ಕ್ಯಾಮರಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಾಯಿ ಪ್ರಿಯಾಂಕಾ ದೇವಿ ಮಗುವನ್ನು ಸತ್ತಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ವಿಚಾರಣೆ ನಡೆಸಿದ ವೇಳೆ ಮಗುವನ್ನು ತಾನೇ ಕಾಲುವೆಗೆ ಎಸೆದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಸದ್ಯ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version