ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾನೂ ಹಾರಿದ ತಾಯಿ! - Mahanayaka

ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾನೂ ಹಾರಿದ ತಾಯಿ!

vijayapura
13/01/2025

ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆಸೆದ ತಾಯಿ ತಾನೂ ಕಾಲುವಿಗೆ ಹಾರಿದ್ದು, ಪರಿಣಾಮವಾಗಿ ನಾಲ್ವರು ಮಕ್ಕಳು ನೀರು ಪಾಲಾದರೆ, ತಾಯಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ವಿಜಯಪುರದ ನಿಡಗುಂದಿ ತಾಲೂಕಿನ ಬೇನಾಳ ಬಳಿ ನಡೆದಿದೆ.

ತನು ಲಿಂಗರಾಜ್ ಭಜಂತ್ರಿ(5), ರಕ್ಷಾ ಲಿಂಗರಾಜ್ ಭಜಂತ್ರಿ(3) ಹಾಗೂ 13 ತಿಂಗಳ ಅವಳಿ ಜವಳಿ ಹಸೇನ, ಹುಸೇನ ಎಂಬ ಮಕ್ಕಳು ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.
ಲಿಂಗರಾಜ್ ಭಜಂತ್ರಿ ಕುಟುಂಬದಲ್ಲಿ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದರಿಂದ ನೊಂದಿದ್ದ ಲಿಂಗರಾಜ್, ಇದೇ ಸಿಟ್ಟಿನಲ್ಲಿ ಪತ್ನಿ ಭಾಗ್ಯಶ್ರೀ ಮೇಲೆ ಕೋಪಗೊಂಡು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಭಾಗ್ಯಶ್ರೀ ದುಷ್ಕೃತ್ಯ ಎಸಗಿದ್ದಾಳೆ.

ಕೋಲ್ಹಾರ ತಾಲೂಕಿನ ತೆಲಗಿ ಗ್ರಾಮದ ಲಿಂಗರಾಜ್ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲು ಆಸ್ತಿ ಮಾರಾಟ ಮಾಡಬೇಕು ಎಂಬ ನಿರ್ಧಾರಕ್ಕೆ ಬಂದಿದ್ದ. ತನ್ನ ಪಿತ್ರಾರ್ಜಿತ ಆಸ್ತಿ ಪಾಲು ನೀಡುವಂತೆ ತಂದೆ ತಾಯಿಗೆ ಕೇಳಿದ್ದ. ಆದ್ರೆ ಲಿಂಗರಾಜ ಸಹೋದರರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ತಂದೆ ತಾಯಿ ಇರುವವರೆಗೂ ಆಸ್ತಿಯಲ್ಲಿ ಪಾಲು ನೀಡಬಾರದು ಎಂದು ಸಹೋದರರು ಹೇಳಿದ್ದು, ಇದರಿಂದಾಗಿ ಜಗಳವಾಗಿತ್ತು. ಇದೇ ವಿಚಾರಕ್ಕೆ ಭಾಗ್ಯಶ್ರೀ ಹಾಗೂ ಲಿಂಗರಾಜು ನಡುವೆ ಗಲಾಟೆ ನಡೆದಿತ್ತು. ಇದೀಗ ಬಾಳಿ ಬದುಕಬೇಕಾದ ಅಮಾಯಕ ಕಂದಮ್ಮಗಳು ಬಲಿಯಾಗಿವೆ.

ಎಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ ಕುಟುಂಬ:

ಹುಣ್ಣಿಮೆ ಪ್ರಯುಕ್ತ ನಿಂಗರಾಜ ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ನಿದಗುಂದಿ ತಾಲೂಕಿನ ಎಲ್ಲಮ್ಮನ ಬೂದಿಹಾಳ ಗ್ರಾಮಕ್ಕೆ ಎಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ. ಆಲಮಟ್ಟಿ ಎಡದಂಡೆ ಕಾಲುವೆ ಬಳಿ ನಿಂಗರಾಜನ ಬೈಕ್ ನಲ್ಲಿ ಪೆಟ್ರೋಲ್ ಖಾಲಿಯಾಗಿತ್ತು. ಹೀಗಾಗಿ ಪತ್ನಿಯನ್ನು ಕೆನಾಲ್ ಬಳಿ ನಿಲ್ಲಿಸಿ ಪೆಟ್ರೋಲ್ ತರಲು ನಿಂಗರಾಜ ತೆರಳಿದ್ದ, ಈ ವೇಳೆ ನಾಲ್ಕು ಮಕ್ಕಳನ್ನು ನೀರಿಗೆ ಎಸೆದ ಭಾಗ್ಯಶ್ರೀ, ತಾನೂ ಹಾರಿದ್ದಾಳೆ. ಈ ದೃಶ್ಯ ನೋಡಿದ ಮೀನುಗಾರರು ಭಾಗ್ಯಶ್ರೀಯನ್ನು ರಕ್ಷಿಸಿದ್ದಾರೆ. ಆಕೆ ತೀವ್ರವಾಗಿ ಅಸ್ವಸ್ಥಗೊಂಡಿದ್ದಳು, ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ