ಮಗುವಿಗೆ ಜನ್ಮ ನೀಡಿದ ತಾಯಿ ತೀವ್ರ ರಕ್ತಸ್ರಾವದಿಂದ ಸಾವು!

01/02/2024
ಗಂಗೊಳ್ಳಿ: ಮಗುವಿಗೆ ಜನ್ಮ ನೀಡಿದ ತಾಯಿಯೊಬ್ಬರು ವಿಪರೀತ ರಕ್ತಸ್ರಾವದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಜ.30ರಂದು ಈ ಘಟನೆ ನಡೆದಿದ್ದು, ಗಂಗೊಳ್ಳಿಯ ನಾಗರತ್ನ(38) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು.
ಮಗುವಿಗೆ ಜನ್ಮ ನೀಡಿದ ಬಳಿಕ ಅವರಿಗೆ ತೀವ್ರ ರಕ್ತಸ್ರಾವವಾಗಿದೆ. ಹೀಗಾಗಿ ವೈದ್ಯರ ಸೂಚನೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ವೈದ್ಯರು ಪರೀಕ್ಷಿಸಿದಾಗ ನಾಗರತ್ನ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ಗಂಗೊಳ್ಳಿಯ ನಾಗರತ್ನ ಅವರು ವಿವಾಹವಾಗಿದ್ದರು. ಇದೀಗ ಮಗುವಿಗೆ ಜನ್ಮ ನೀಡಿ ಇಹಲೋಕ ತ್ಯಜಿಸಿದ್ದಾರೆ. ಘಟನೆ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.