ನವಜಾತ ಶಿಶುವಿನ ಕತ್ತು ಕೊಯ್ದು ಹತ್ಯೆ ಮಾಡಿದ ತಾಯಿ!

25/08/2025

ಶಿವಮೊಗ್ಗ: ಸಮಾಜಕ್ಕೆ ಅಂಜಿ ನವಜಾತ ಶಿಶುವಿನ ಕತ್ತು ಕೊಯ್ದು ಹತ್ಯೆ ಮಾಡಿದ್ದ ತಾಯಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

1 ದಿನದ ಗಂಡು ಮಗುವನ್ನು ತಾಯಿಯೇ ಕತ್ತುಸೀಳಿ ಹತ್ಯೆ ಮಾಡಿರುವುದು ತನಿಖೆಯಿಂದ ಬಯಲಾಗಿತ್ತು.  ಶಿವಮೊಗ್ಗ ಜಿಲ್ಲೆಯ ಹೊನ್ನಾಳಿಯ ತಿಮ್ಲಾಪುರದ ಶೈಲಾ ಎಂಬ ಮಹಿಳೆ ಬಂಧಿತ ಮಹಿಳೆಯಾಗಿದ್ದಾಳೆ.

ಆ.16ರಂದು ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿತ್ತು. ಶೌಚಾಲಯದಲ್ಲಿ ಶವನೋಡಿ ಇತರ ರೋಗಿಗಳು ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

ಶೈಲಾಗೆ 2 ಮಕ್ಕಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡಿದ್ದರೂ, ಆಕೆ ಗರ್ಭಿಣಿಯಾಗಿದ್ದಳು. ಹೀಗಾಗಿ ತಾನು ಗರ್ಭಿಣಿಯಾಗಿರುವುದನ್ನು ಕುಟುಂಬಸ್ಥರಿಂದ ಮುಚ್ಚಿಟ್ಟಿದ್ದಳು.

ಥೈರಾಯ್ಡ್ ಗೆ ಚಿಕಿತ್ಸೆ ಪಡೆಯುವುದಾಗಿ ಹೇಳಿ ಆಸ್ಪತ್ರೆಗೆ ಬಂದಿದ್ದ ಶೈಲಾ ಆಸ್ಪತ್ರೆಯ ಶೌಚಾಲಯದಲ್ಲಿ ತಾನೇ ನಾರ್ಮಲ್ ಡೆಲಿವರಿ ಮಾಡಿಕೊಂಡಿದ್ದಳು. ಬಳಿಕ ಶಸ್ತ್ರ ಚಿಕಿತ್ಸೆಗೆ ಬಳಸುವ ಬ್ಲೇಡ್ ನಿಂದ ಮಗುವಿನ ಕತ್ತು ಕೊಯ್ದು ಹತ್ಯೆ ಮಾಡಿದ್ದಳು ಎಂದು ವರದಿಗಳಿಂದ ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version