ಕೇರಳ, ಕಾಶ್ಮೀರ ಫೈಲ್ಸ್ ನಂತೆ ‘ಮಣಿಪುರ ಫೈಲ್ಸ್’ ಸಿನಿಮಾ ಮಾಡಬೇಕು: ಕೇಂದ್ರಕ್ಕೆ ಉದ್ಧವ್ ಠಾಕ್ರೆ ‘ಸಾಮ್ನಾ’ದಲ್ಲಿ ಛಾಟಿಯೇಟು..!

udbav
22/07/2023

ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪಕ್ಷದ ಮುಖ್ಯವಾಣಿಯಾಗಿರುವ ‘ಸಾಮ್ನಾ’ ಪ್ರತಿಕೆಯ ಸಂಪಾದಕೀಯದಲ್ಲಿ ಮಣಿಪುರವು ಕಾಶ್ಮೀರಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹೀಗಾಗಿ ‘ದಿ ಮಣಿಪುರ ಫೈಲ್ಸ್’ ಸಿನಿಮಾ ಮಾಡಬಹುದು ಎಂದು ಬರೆದಿದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಎನ್​​ ಬಿರೇನ್​​ ಸಿಂಗ್ ಅವರ ವಿರುದ್ಧ ಉದ್ಧವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ದೌರ್ಜನ್ಯ ಕಾಶ್ಮೀರಕ್ಕಿಂತ ಕೆಟ್ಟದಾಗಿ ಎಂದು ಹೇಳಿದ್ದಾರೆ. 2022ರಲ್ಲಿ ಆಗಸ್ಟ್​ 5ರಂದು “ಸಾಮ್ನಾ” ಪ್ರತಿಕೆಯ ಸಂಪಾದಕರಾಗಿ ಉದ್ಧವ್ ಠಾಕ್ರೆ ನೇಮಕಗೊಂಡರು. ಅವರು ಇದೀಗ ಈ ಪ್ರತಿಕೆಯ ಸಂಪಾದಕಿಯದಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಬರೆದಿದ್ದಾರೆ.

ಮೇ 4ರಂದು ಚಿತ್ರಿಸಲಾಗಿದ್ದ, ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋವನ್ನು ಇತ್ತಿಚೇಗೆ ವೈರಲ್​ ಮಾಡಲಾಗಿತ್ತು. ಇದರಲ್ಲಿ ಪುರುಷರ ಗುಂಪೊಂದು ಇಬ್ಬರು ಸ್ತ್ರೀಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ. ಈ ಬಗ್ಗೆ ದೇಶದ್ಯಾಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದೇಶದ ಪ್ರಧಾನಿ ಸೇರಿದಂತೆ, ಸುಪ್ರೀಂ ಕೋರ್ಟಿನ ಮುಖ್ಯನ್ಯಾಯ ಮೂರ್ತಿ ಡಿ.ವೈ ಚಂದ್ರಚೂಡ್ ಅವರು​​​ ಕೂಡ ಈ ಕೃತ್ಯವನ್ನು ಖಂಡಿಸಿದ್ದರು.

ಇನ್ನೂ ಈ ಸಾಮ್ನಾ ಪ್ರತಿಕೆಯಲ್ಲಿ ಇತ್ತೀಚಿನ ದಿನಗಳಲ್ಲಿ, ‘ತಾಷ್ಕೆಂಟ್ ಫೈಲ್ಸ್’, ‘ದಿ ಕೇರಳ ಸ್ಟೋರಿ’ ಮತ್ತು ‘ದಿ ಕಾಶ್ಮೀರ್ ಫೈಲ್ಸ್’ ನಂತಹ ಚಲನಚಿತ್ರಗಳನ್ನು ನಿರ್ಮಿಸಲಾಗಿದೆ. ಇದರಂತೆ ದಿ ಮಣಿಪುರ ಫೈಲ್ಸ್ ಮಾಡಬಹುದು ಎಂದು ಇದರಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version