ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ.
ಅವರು ಬೆಂಗಳೂರು ರಸ್ತೆಗೆ ಸಂಸದರೇ? ಎಂದು ಪ್ರಶ್ನಿಸಿದ ಮುಖ್ಯ ಮಂತ್ರಿಗಳು ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ, ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ, ಆದರೆ ರಾಜಕೀಯ ಮಾತನಾಡುವುದಿಲ್ಲ ಎಂದರು.
ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ ಮಾಹಿತಿ ಇದ್ದರೆ ಹೇಳಲಿ. ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ ಎಂದ ಮುಖ್ಯಮಂತ್ರಿಗಳು ಪೇ ಸಿಎಂ ಕುರಿತು ತನಿಖೆ ಮಾಡಿಸಲು ಹೇಳಿರಲಿಲ್ಲ. ತನಿಖೆಯನ್ನು ಯಾವಾಗ , ಯಾರಿಂದ ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವುದು ನಮಗೆ ಸೇರಿದ್ದು ಎಂದರು.
ಅಧಿಕೃತ ಸಭೆಯಲ್ಲ:
ನಿನ್ನೆ ನಡೆದ ಬಿಬಿಎಂಪಿ ಸಭೆಯಲ್ಲಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲ ಅವರು ಭಾಗಿಯಾಗಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅದು ಅಧಿಕೃತ ಸಭೆಯಲ್ಲ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಪ್ರಾಸಂಗಿಕವಾಗಿ ಬಿಬಿಎಂಪಿ ಚುನಾವಣೆ ಬಗ್ಗೆಯೂ ಮಾತನಾಡಿದ್ದಾರೆ.
ಹೆಬ್ಬಾಳ ಫ್ಲೈ ಓವರ್ ನೋಡಲು ಹೋಗುತ್ರಿದ್ದ ಸಂದರ್ಭದಲ್ಲಿ ಕುಳಿತಿದ್ದಾರೆ. ಉಪಮುಖ್ಯಮಂತ್ರಿಗಳು ಶಾಸಕರನ್ನು ಭೇಟಿ ಮಾಡಿದ್ದು, ಕಾನೂನು ಅಭಿಪ್ರಾಯ ಪಡೆಯಲು ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























